Sunday, May 26, 2024
Homeಕರಾವಳಿಮಂಗಳೂರು: ಬೆಂಕಿ ತಗುಲಿ ಎರಡು ಅಂಗಡಿಗಳು ಸುಟ್ಟು ಭಸ್ಮ !

ಮಂಗಳೂರು: ಬೆಂಕಿ ತಗುಲಿ ಎರಡು ಅಂಗಡಿಗಳು ಸುಟ್ಟು ಭಸ್ಮ !

spot_img
- Advertisement -
- Advertisement -

ಮಂಗಳೂರು: ಇಂದು ಮುಂಜಾನೆ ನಗರದ ಹೃದಯಭಾಗದಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಇಲ್ಲಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿರುವ ಸಿಟಿ ಮಾರುಕಟ್ಟೆಯಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕನಿಷ್ಠ ಎರಡು ಅಂಗಡಿಗಳಿಗೆ ವ್ಯಾಪಿಸಿದೆ, ಒಂದು ಎಲೆಕ್ಟ್ರಿಕಲ್ ಮತ್ತು ಇನ್ನೊಂದು ಚೀಲಗಳು ಮತ್ತು ಪಾದರಕ್ಷೆಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಎಂದು ತಿಳಿದುಬಂದಿದೆ. ಎರಡೂ ಅಂಗಡಿಗಳು ಸುಟ್ಟು ಕರಕಲಾಗಿವೆ.

ಅಂಗಡಿ ಮಾಲೀಕರೊಬ್ಬರು ಉತ್ತರ ಭಾರತದವರು ಎಂದು ಮೂಲಗಳು ತಿಳಿಸಿವೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಎರಡು ಅಂಗಡಿಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

ಪಾಂಡೇಶ್ವರ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

- Advertisement -
spot_img

Latest News

error: Content is protected !!