Saturday, April 27, 2024
Homeಕರಾವಳಿಕಾಸರಗೋಡುಭಾರತ ತಂಡದ ಪರ ಆಡಿದ್ದ ಕೇರಳದ ಮೊದಲ ಕ್ರಿಕೆಟಿಗ ಆತ್ಮಹತ್ಯೆಗೆ ಶರಣು!..

ಭಾರತ ತಂಡದ ಪರ ಆಡಿದ್ದ ಕೇರಳದ ಮೊದಲ ಕ್ರಿಕೆಟಿಗ ಆತ್ಮಹತ್ಯೆಗೆ ಶರಣು!..

spot_img
- Advertisement -
- Advertisement -

ಅಲಪ್ಪುಳ: ಕೇರಳದ ಮಾಜಿ ಕ್ರಿಕೆಟಿಗ ಎಂ.ಸುರೇಶ್‌ ಕುಮಾರ್‌ (47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರ ಮೃತದೇಹ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಾಹುಲ್‌ ದ್ರಾವಿಡ್‌ ಅವರು ಭಾರತ ತಂಡದ ನಾಯಕರಾಗಿದ್ದ ಅವಧಿಯಲ್ಲಿ ಎಡಗೈ ಸ್ಪಿನ್ನರ್‌ ಆಗಿದ್ದ ಸುರೇಶ್‌ ಅವರು ಭಾರತ ತಂಡದ ಪರ ಆಡಿದ್ದ ಕೇರಳದ ಮೊದಲ ಕ್ರಿಕೆಟಿಗ ಎಂಬ ಹಿರಿಮೆ ಹೊಂದಿದ್ದರು. 1990ರಲ್ಲಿ ನಡೆದಿದ್ದ 19 ವರ್ಷದೊಳಗಿನವರ ಕ್ರಿಕೆಟ್‌ ಟೂರ್ನಿಯ ನ್ಯೂಜಿಲೆಂಡ್‌ ಎದುರಿನ ಪಂದ್ಯದಲ್ಲಿ ಆಡುವ ಮೂಲಕ ಈ ಸಾಧನೆ ಮಾಡಿದ್ದರು.

2005ರಲ್ಲಿ ಪಾಲಕ್ಕಾಡ್‌ನಲ್ಲಿ ಆಯೋಜನೆಯಾಗಿದ್ದ ಜಾರ್ಖಂಡ್‌ ಎದುರಿನ ರಣಜಿ ಪಂದ್ಯದ ಬಳಿಕ ಸುರೇಶ್,‌ ಕ್ರಿಕೆಟ್‌ ಬದುಕಿಗೆ ವಿದಾಯ ಹೇಳಿ ಭಾರತೀಯ ರೈಲ್ವೆಯ ಉದ್ಯೋಗಿಯಾಗಿದ್ದರು.ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು ಇದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಈ ಕುರಿತು ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!