Friday, January 27, 2023
Homeಕರಾವಳಿಉಡುಪಿನಿಟ್ಟೆಯಲ್ಲಿ ದೇಶದಲ್ಲೇ ಮೊಟ್ಟಮೊದಲ ಘನ ತ್ಯಾಜ್ಯ ವಿಲೇವಾರಿ ಕೇಂದ್ರ: ಏಪ್ರಿಲ್‌ 3 ರಂದು ಲೋಕಾರ್ಪಣೆ

ನಿಟ್ಟೆಯಲ್ಲಿ ದೇಶದಲ್ಲೇ ಮೊಟ್ಟಮೊದಲ ಘನ ತ್ಯಾಜ್ಯ ವಿಲೇವಾರಿ ಕೇಂದ್ರ: ಏಪ್ರಿಲ್‌ 3 ರಂದು ಲೋಕಾರ್ಪಣೆ

- Advertisement -
- Advertisement -

ಕಾರ್ಕಳ: ಗ್ರಾಮೀಣ ಭಾರತದ ಮಟ್ಟಿಗೆ ಇದು ದೇಶದಲ್ಲೇ ಏಕೈಕ ಘನ ತ್ಯಾಜ್ಯ ವಿಲೇವಾರಿ ನಿರ್ವಹಣಾ ಕೇಂದ್ರ. ಪ್ರತಿ ದಿನ 10 ಟನ್ ಸಾಮರ್ಥ್ಯದ ಈ ಘನ ತ್ಯಾಜ್ಯ ನಿರ್ವಹಣಾ ಕೇಂದ್ರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಕಾರ್ಯಾರಂಭ ಮಾಡಲಿದೆ.

ಆಧುನಿಕ ರೀತಿಯಲ್ಲಿ, ಪರಸರಕ್ಕೆ ಹಾನಿಯಾಗದಂತೆ, ಅತ್ಯಂತ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಈ ಕೇಂದ್ರವನ್ನು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಏಪ್ರಿಲ್ ಮೂರರಂದು ಈ ಕೇಂದ್ರ ಲೋಕಾರ್ಪಣೆಗೊಳ್ಳಲಿದೆ. ಯೋಜನೆ ಒಳಪಡುವ ಗ್ರಾ.ಪಂ ವ್ಯಾಪ್ತಿಯಲ್ಲಿ ಮನೆ ಮನೆಯಿಂದ ಸಂಗ್ರಹಿಸಲಾಗುವ ಒಣ ತ್ಯಾಜ್ಯವನ್ನು ಒಣ ತ್ಯಾಜ್ಯ ನಿರ್ವಹಣಾ ಕೇಂದ್ರದ ಸ್ವಚ್ಛ ಸಂಕೀರ್ಣಕ್ಕೆ ತರಲಾಗುತ್ತದೆ. ಸ್ವಚ್ಛ ಸಂಕೀರ್ಣದಲ್ಲಿ ತ್ಯಾಜ್ಯವನ್ನು ತೂಕ ಮಾಡಿ ಪ್ಯಾಕ್ ಮಾಡಿ ಇಡಲಾಗುತ್ತದೆ. ಪ್ರತಿವಾರ ಎಂಆರ್‌ಎಫ್ ಕೇಂದ್ರದ  ತ್ಯಾಜ್ಯ ಸಂಗ್ರಹಣಾ ವಾಹನವು ಒಣ ತ್ಯಾಜ್ಯವನ್ನು ಸಂಗ್ರಹಿಸುತ್ತದೆ.

ಹೀಗೆ ಸಂಗ್ರಹಿಸಿದ ತ್ಯಾಜ್ಯವನ್ನು ಎಂಆರ್‌ಎಫ್ ಕೇಂದ್ರದಲ್ಲಿ ತೂಕ ಮಾಡಿ ಶೇಖರಣಾ ವಿಭಾಗದಲ್ಲಿ ಶೇಖರಿಸಲಾಗುತ್ತದೆ.ಬಳಿಕ ತ್ಯಾಜ್ಯವನ್ನು ಬಾಯಿಲಿಂಗ್ ಯಂತ್ರದ ಸಹಾಯದಿಂದ ಬಾಯಿಲ್ ಮಾಡಲಾಗುತ್ತದೆ. ಬಾಯಿಲ್ ಮಾಡಿದ ತ್ಯಾಜ್ಯದಲ್ಲಿ ಪುನರ್ ಬಳಕೆ ಮಾಡಬಹುದಾದ ತ್ಯಾಜ್ಯವನ್ನು ಅಧಿಕೃತ ರಿಸೈಕಲಿಂಗ್ ಕಂಪೆನಿಗಳಿಗೆ ಮಾರಾಟ ಮಾಡಲಾಗುತ್ತದೆ. ಪುರ್ನಬಳಕೆ ಮಾಡಲು ಸಾಧ್ಯವಿಲ್ಲದ ತ್ಯಾಜ್ಯವನ್ನು ಕೋ ಪ್ರೋಸೆಸಿಂಗ್ ಉದ್ದೇಶಕ್ಕೆ ಸಿಮೆಂಟ್ ಫ್ಯಾಕ್ಟರಿಗಳಿಗೆ ಸಾಗಿಸಲಾಗುತ್ತದೆ.

ಎಂಆರ್‌ಎಫ್ ಘಟಕವು 10 ಸಾವಿರ ಚದರ ಅಡಿಯ ಕಟ್ಟಡವನ್ನು ಹೊಂದಿದ್ದು, ದಿನವೊಂದಕ್ಕೆ 10 ಟನ್ ತ್ಯಾಜ್ಯವನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಘಟಕದಲ್ಲಿ ತ್ಯಾಜ್ಯ ಶೇಖರಣೆ, ವಿಂಗಡಣೆ ಹಾಗೂ ಬಾಯಿಲಿಂಗ್ ಮಾಡುವ ವಿಭಾಗಗಳಿದ್ದು, ಕಚೇರಿ, ಸೆಕ್ಯೂರಿಟಿ ರೂಮ್, ವಿಶ್ರಾಂತಿ ಕೊಠಡಿ ಹಾಗೂ ಶೌಚಾಲಯ ಸೌಲಭ್ಯವನ್ನು ಹೊಂದಿದೆ.

- Advertisement -
spot_img

Latest News

error: Content is protected !!