Monday, June 8, 2026
Homeತಾಜಾ ಸುದ್ದಿಚಿಂತಾಜನಕ ಸ್ಥಿತಿಯಲ್ಲಿ ಅಸ್ಸಾಂ ರಾಜ್ಯದ ಮಾಜಿ ಮುಖ್ಯಮಂತ್ರಿ "ತರುಣ್ ಗೊಗೊಯ್"!..

ಚಿಂತಾಜನಕ ಸ್ಥಿತಿಯಲ್ಲಿ ಅಸ್ಸಾಂ ರಾಜ್ಯದ ಮಾಜಿ ಮುಖ್ಯಮಂತ್ರಿ “ತರುಣ್ ಗೊಗೊಯ್”!..

- Advertisement -
- Advertisement -

ಗೌಹಾತಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅಸ್ಸಾಂ ರಾಜ್ಯದ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 85 ವರ್ಷ ಪ್ರಾಯದ ತರುಣ್ ಗೊಗೊಯ್ ಅವರಿಗೆ ಆಗಸ್ಟ್ 26ರಂದು ಕೋವಿಡ್ 19 ಸೋಂಕು ಪಾಸಿಟಿವ್ ಆಗಿತ್ತು. ಗೌಹಾತಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.


ಗೊಗೊಯ್ ಅವರ ದೇಹದಲ್ಲಿ ಆಮ್ಲಜನಕ ಹೀರಿಕೊಳ್ಳುವಿಕೆ ಮಟ್ಟ ಕುಸಿತ ಕಂಡ ಹಿನ್ನಲೆಯಲ್ಲಿ ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಇಂದು ಆಸ್ಪತ್ರೆಯ ತುರ್ತುನಿಗಾ ಘಟಕಕ್ಕೆ ವರ್ಗಾಯಿಸಲಾಗಿದೆ. ಅಲ್ಲಿ ಅವರನ್ನು ಐಸೊಲೇಟೆಡ್ ಕೊಠಡಿಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

- Advertisement -

Latest News

error: Content is protected !!