Wednesday, June 3, 2026
Homeತಾಜಾ ಸುದ್ದಿಹುಟ್ಟೂರಿನಲ್ಲಿ ನೆರವೇರಿದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಂ ಅಂತ್ಯಕ್ರಿಯೆ

ಹುಟ್ಟೂರಿನಲ್ಲಿ ನೆರವೇರಿದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಂ ಅಂತ್ಯಕ್ರಿಯೆ

- Advertisement -
- Advertisement -

ಬೆಂಗಳೂರು: ನಿನ್ನೆ ನಿಧನರಾದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಂ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿತು.

ಶಿವರಾಂ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಜಾಗದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಸರಕಾರ ಅದಕ್ಕೆ ಸಮ್ಮತಿ ನೀಡದೇ ಇರುವ ಕಾರಣದಿಂದಾಗಿ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ತೆಗೆದುಕೊಂಡು ಹೋಗಲಾಯಿತು. ಬಳಿಕ ಸಂಪ್ರದಾಯದಂತೆ ಅವರ ಅಂತ್ಯಸಂಸ್ಕಾರ ನೆರವೇರಿತು.

ರಾಮನಗರ ತಾಲೂಕಿನ ಬಿಡದಿ ಬಳಿಯ ಉರಗಹಳ್ಳಿಯಲ್ಲಿ ಛಲವಾದಿ ಮಹಾಸಭಾದ ಸ್ವಾಮೀಜಿಯ ನೇತೃತ್ವದಲ್ಲಿ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತಿಮ ವಿಧಿ ವಿಧಾನವನ್ನು ಶಿವರಾಮ್ ಅಳಿಯ ನಟ ಪ್ರದೀಪ್ ಅವರು ನೆರವೇರಿಸಿದರು.

ಡಿಸಿ ಅವಿನಾಶ್ ಮೆನನ್ ರಾಜೇಂದ್ರ, ಎಸ್ಪಿ ಸೇರಿದಂತೆ ಹಲವರು ಅಂತ್ಯಕ್ರಿಯೆ ವೇಳೆಯಲ್ಲಿ ನೆರೆದಿದ್ದರು. ಅಗಲಿದ ನಾಯಕನಿಗೆ ಅಭಿಮಾನಿಗಳು ಕಣ್ಣೀರಿನ ವಿದಾಯ ಹೇಳಿದರು.

- Advertisement -

Latest News

error: Content is protected !!