Monday, June 8, 2026
Homeಕರಾವಳಿಬೆಳ್ತಂಗಡಿ : ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಬೆದರಿಕೆ: ಅಪ್ರಾಪ್ತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ,...

ಬೆಳ್ತಂಗಡಿ : ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಬೆದರಿಕೆ: ಅಪ್ರಾಪ್ತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ, ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಪ್ರಾಪ್ತೆ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಮನೆಯ ದಯಾನಂದ ಗೌಡ(32) ವಶಕ್ಕೆ ಪಡೆಯಲಾಗಿದೆ.

ಬಾಲಕಿಯನ್ನು ಇನ್ ಸ್ಟ್ರಾಗ್ರಾಂ ಮೂಲಕ ಪರಿಚಯ ಮಾಡಿಕೊಂಡ ಯುವಕ ಆಕೆಯ ಮೊಬೈಲ್ ನಂಬರ್ ಪಡೆದುಕೊಂಡು ಆಕೆಯೊಂದಿಗೆ ಸಂಪರ್ಕ ಬೆಳೆಸಿ ಆಕೆಯನ್ನು ಕಳೆಂಜ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರವೆಸಗಿದ್ದಾನೆ. ಇದನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಮನ ನೊಂದ ಬಾಲಕಿ ಮನೆಯ ಸಮೀಪವಿರುವ ಬಾವಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ್ದಾಳೆ. ಮನೆಯವರು ಕೂಡಲೇ ಆಕೆಯನ್ನು ಬಾವಿಯಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಅತ್ಯಾಚಾರವೆಸಗಿರುವ ವಿಚಾರ ಬಹಿರಂಗವಾಗಿದೆ.

 ಇದೀಗ ಬಾಲಕಿ ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!