Saturday, May 18, 2024
Homeಕರಾವಳಿಉಡುಪಿಉಡುಪಿ: ಹಿಜಾಬ್ ಕಾಲೇಜಿನ ಕೀರ್ತಿ ಪತಾಕೆ ಹಾರಿಸಿದ ಬಡ ವಿದ್ಯಾರ್ಥಿನಿ: ಧರ್ಮಕ್ಕಿಂತ ಶಿಕ್ಷಣವೇ ಮುಖ್ಯ ಅಂತ...

ಉಡುಪಿ: ಹಿಜಾಬ್ ಕಾಲೇಜಿನ ಕೀರ್ತಿ ಪತಾಕೆ ಹಾರಿಸಿದ ಬಡ ವಿದ್ಯಾರ್ಥಿನಿ: ಧರ್ಮಕ್ಕಿಂತ ಶಿಕ್ಷಣವೇ ಮುಖ್ಯ ಅಂತ ಸಾಬೀತು ಪಡಿಸಿದ ಹುಡುಗಿ ‌

spot_img
- Advertisement -
- Advertisement -

ಉಡುಪಿ; ಬಡಮಕ್ಕಳ ಕಾಲೇಜಿನ ಹುಡುಗಿಯೊಬ್ಬಳು ಅತಿ ದೊಡ್ಡ ಸಾಧನೆ ಮಾಡಿದ್ದಾಳೆ. ಹಿಜಾಬ್ ವಿವಾದ ಆರಂಭವಾದ ಉಡುಪಿಯ ಸರಕಾರಿ ಪದವಿಪೂರ್ವ ಹೆಮ್ಮಕ್ಕಳ ಕಾಲೇಜಿನ, ಹತ್ತನೇ ತರಗತಿಯ ಹುಡುಗಿಯೊಬ್ಬಳು 625 ಅಂಕ ಪಡೆದು ಹೊಸ ಸಾಧನೆ ಮೆರೆದಿದ್ದಾಳೆ. ಧರ್ಮ ಮುಖ್ಯವೋ ಶಿಕ್ಷಣ ಮುಖ್ಯವೋ? ಎಂಬ ಚರ್ಚೆಯನ್ನು ರಾಜ್ಯಾದ್ಯಂತ ಹುಟ್ಟುಹಾಕಿದ್ದ ಕಾಲೇಜು, ಶಿಕ್ಷಣವೇ ಮುಖ್ಯ ಅನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.

ಉಡುಪಿಯಲ್ಲಿ ಹಿಜಾಬ್ ವಿವಾದ ಆರಂಭವಾದಾಗ ಈ  ಪಿಯು ಕಾಲೇಜಿನ ಬಗ್ಗೆ ಮೂಗು ಮುರಿದವರೇ ಹೆಚ್ಚು . ಇದೇ ಕಾಲೇಜಿನ ಪಿಯುಸಿ ವಿಭಾಗದ  ಆರು ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದಾಗ, ಅದೇ ಸಮುದಾಯದ ಇತರ ವಿದ್ಯಾರ್ಥಿನಿಯರು ಅನೇಕರು ಶಿಕ್ಷಣ ವಂಚಿತರಾಗಬೇಕಾಯಿತು. ರಾಜ್ಯದಲ್ಲಿ ಶಿಕ್ಷಣ ಮುಖ್ಯವೋ ಧರ್ಮ ಮುಖ್ಯವೋ ಎಂಬ ಮಹತ್ವದ ಚರ್ಚೆ ಕೂಡ ನಡೆಯಿತು. ಇದೀಗ ಜೀವನದ ಸುಧಾರಣೆಗೆ ಬದಲಾವಣೆಗೆ ಶಿಕ್ಷಣವೇ ಮುಖ್ಯ ಅನ್ನುವುದನ್ನು ಅದೇ ಕಾಲೇಜು ಸಾಬೀತು ಮಾಡಿದೆ. ಹೆಣ್ಣುಮಕ್ಕಳ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿನಿಯೊಬ್ಬಳು, ಹಿಜಾಬ್ ವಿವಾದದ ಗದ್ದಲಗಳ ನಡುವೆ 625 ಅಂಕ ಪಡೆದು ಈ ಶಿಕ್ಷಣ ಸಂಸ್ಥೆಯ ಕೀರ್ತಿ ಪತಾಕೆ ಹಾರಿಸಿದ್ದಾಳೆ.

ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿನಿ ಗಾಯತ್ರಿ ಈ ಸಾಧನೆ ಮಾಡಿದ ಹುಡುಗಿ. ನಿಜಕ್ಕೂ ಈ ಸಾಧನೆಗೊಂದು ಅರ್ಥ ಇದೆ. ಜೀವನದಲ್ಲಿ ಶಿಕ್ಷಣಕ್ಕೆ ಮಾತ್ರ ಕೊಟ್ಟರೆ ಯಾವುದೇ ಸಮಸ್ಯೆಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಈ ಈಕೇನೇ ಸಾಕ್ಷಿ. ಮನೆಯಲ್ಲಿ ಕಿತ್ತು ತಿನ್ನುವ ಬಡತನ ಇದ್ದರೂ , ಪೋಷಕರು ಶೈಕ್ಷಣಿಕವಾಗಿ ಸದೃಢರಲ್ಲದೇ ಹೋದರೂ ಬಡವರ ಕಾಲೇಜಿನ ಬಡವರ ಹುಡುಗಿ ಈ ಹೊಸ ದಾಖಲೆ ಬರೆದಿದ್ದಾಳೆ. ತಂದೆ ಮೇಸ್ತ್ರಿ ಕೆಲಸ ಮಾಡುತ್ತಾರೆ ತಾಯಿ ಬೀಡಿ ಕಟ್ಟುತ್ತಾರೆ, ಮಗಳು 625 ಅಂಕ ಗಳಿಸುತ್ತಾಳೆ…. ಇದೆಲ್ಲಾ ಹೇಗಮ್ಮಾ ಸಾಧ್ಯವಾಯಿತು ಎಂದು ಕೇಳಿದರೆ… ಓದು, ಶಿಕ್ಷಕರ ಸಹಾಯ , ಮನೆಯವರ ಪ್ರೋತ್ಸಾಹ ಕಾರಣ ಎನ್ನುತ್ತಾಳೆ ಗಾಯತ್ರಿ

ತಮ್ಮ ಶಾಲೆಯ ಕೀರ್ತಿಪತಾಕೆ ಹಾರಿಸಿದ ಹುಡುಗಿಯ ಬಗ್ಗೆ ಆಡಳಿತ ಮಂಡಳಿಗೂ ಹೆಮ್ಮೆ. ಉಡುಪಿಯ ಈ ಕಾಲೇಜಿಗೆ ವಿಶೇಷ ಮಾನ್ಯತೆ ಇದೆ. ಬಡವರ ಮನೆ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಸರಕಾರೇತರ ಸಹಾಯಗಳನ್ನು ಕೂಡ ಇಲ್ಲಿ ನೀಡಲಾಗುತ್ತದೆ. ಆದರೆ ಎಲ್ಲಾ ಬಣ್ಣ ಮಸಿ ನುಂಗಿತು ಎಂಬ ಗಾದೆ ಮಾತಿನಂತೆ ಹಿಜಾಬ್ ವಿವಾದದ ನಂತರ ಆಡಳಿತ ಮಂಡಳಿ ಮತ್ತು ಶಿಕ್ಷಕರು ಕುಸಿದು ಹೋಗಿದ್ದರು. ಈಗ ಈ ಶಾಲೆಯ ಆಡಳಿತ ಮಂಡಳಿಗೆ ಗಾಯತ್ರಿ ಬೂಸ್ಟರ್ ಡೋಸ್ ಕೊಟ್ಟಿದ್ದಾಳೆ

- Advertisement -
spot_img

Latest News

error: Content is protected !!