Friday, June 27, 2025
Homeತಾಜಾ ಸುದ್ದಿರಾಜ್ಯದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡೋ ಹೆಣ್ಮಕ್ಕಳಿಗೆ ಗುಡ್ ನ್ಯೂಸ್ : ವರ್ಷಕ್ಕೆ...

ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡೋ ಹೆಣ್ಮಕ್ಕಳಿಗೆ ಗುಡ್ ನ್ಯೂಸ್ : ವರ್ಷಕ್ಕೆ 6 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ಸರ್ಕಾರ ಚಿಂತನೆ

spot_img
- Advertisement -
- Advertisement -

ಬೆಂಗಳೂರು :ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡೋ ಹೆಣ್ಮಕ್ಕಳಿಗೆ ಗುಡ್ ನ್ಯೂಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವರ್ಷಕ್ಕೆ 6 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ.

ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕರ್ನಾಟಕವು ಮಹಿಳೆಯರಿಗೆ ವರ್ಷಕ್ಕೆ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪಡೆಯಲು ಅರ್ಹವಾದ ನೀತಿಯನ್ನು ಅಂತಿಮಗೊಳಿಸುತ್ತಿದೆ, ಈ ಕ್ರಮವು ಲಕ್ಷಾಂತರ ಉದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಈ ಯೋಜನೆ ಜಾರಿಯಾದರೆ ಬಿಹಾರ, ಕೇರಳ ಮತ್ತು ಒಡಿಶಾದ ನಂತರ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ನಾಲ್ಕನೇ ರಾಜ್ಯ ಕರ್ನಾಟಕವಾಗಲಿದೆ. ‘ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಸಪ್ನಾ ಎಸ್ ನೇತೃತ್ವದ 18 ಸದಸ್ಯರ ಸಮಿತಿ ವರದಿ ಸಲ್ಲಿಸಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!