Tuesday, May 7, 2024
Homeತಾಜಾ ಸುದ್ದಿಹೈಕೋರ್ಟ್ ನಿಂದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ FIRಗೆ ತಡೆ..!

ಹೈಕೋರ್ಟ್ ನಿಂದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ FIRಗೆ ತಡೆ..!

spot_img
- Advertisement -
- Advertisement -

ಬೆಂಗಳೂರು: ನಗರದ ನಗರ್ತಪೇಟೆಯಲ್ಲಿ ಮುಖೇಶ್ ಎಂಬ ಯುವಕನ ಮೇಲೆ ಹಲ್ಲೆ ಖಂಡಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಸಂಸದ ತೇಜಸ್ವಿ ಸೂರ್ಯವಿರುದ್ಧದ ಕೇಸ್‌ ಹಾಗೂ ಬೆಂಗಳೂರಿನ ಕೆಫೆ ಸ್ಫೋಟದ ಶಂಕಿತ ಆರೋಪಿಯನ್ನು ತಮಿಳುನಾಡಿಗೆ ಲಿಂಕ್ ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧದ ಎಫ್‌ಐಆರ್​ಗೂ ಹೈಕೋರ್ಟ್ ತಡೆ ನೀಡಿದೆ.

ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಕಳೆದ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ, ಮತೀಯ ಭಾವನೆ ಕೆರಳಿಸುವಂತೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚಿಕ್ಕಪೇಟೆ ನಿವಾಸಿಯೊಬ್ಬರು ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಬಳಿಕ ಆಯೋಗದ ಸೂಚನೆ ಮೇರೆಗೆ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಇದೀಗ ಈ ಪ್ರಕರಣವನ್ನು ರದ್ದು ಕೋರಿ ತೇಜಸ್ವಿ ಸೂರ್ಯ, ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. 

ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್​ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.

- Advertisement -
spot_img

Latest News

error: Content is protected !!