- Advertisement -
- Advertisement -
ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಏಪ್ರಿಲ್ 20 ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಆರಂಭಿಸಲು ಸೂಚಿಸಿದೆ.
ಕೊರೊನಾ ಸೋಂಕು ತಡೆಯಲು ಲಾಕ್ ಡೌನ್ ಜಾರಿ ಮಾಡಿದ್ದರಿಂದ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ರಾಜ್ಯದ ಒಳಗೆ ಮತ್ತು ಹೊರಗೆ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಗೃಹ ಸಚಿವಾಲಯದ ವತಿಯಿಂದ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ.
ಈ ಹಿನ್ನಲೆಯಲ್ಲಿ ಟೋಲ್ ಶುಲ್ಕ ಸಂಗ್ರಹ ಪ್ರಕ್ರಿಯೆ ಆರಂಭಿಸಬೇಕು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದು ಇದರಂತೆ ನಾಳೆಯಿಂದ ಟೋಲ್ ಸಂಗ್ರಹ ಆರಂಭವಾಗಲಿದೆ.
- Advertisement -