Wednesday, May 15, 2024
Homeಕರಾವಳಿಉಡುಪಿತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ವಿಚಾರ: ಡಾ.ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ...

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ವಿಚಾರ: ಡಾ.ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚನೆ – ಸುನಿಲ್‌ ಕುಮಾರ್

spot_img
- Advertisement -
- Advertisement -

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕೆಂಬ ಕರಾವಳಿಗರ ಹಲವು ವರ್ಷಗಳ ಬೇಡಿಕೆ ಈಡೇರುವ ಸಾಧ್ಯತೆ ಕಂಡುಬರ್ತಿದೆ. ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ವಿಚಾರಕ್ಕೆ ಸಂಬಂಧಿಸಿದಂತೆ  ಮೋಹನ್ ಆಳ್ವ ನೇತೃತ್ವದ ಸಮಿತಿ ರಚಿಸಲಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವ ಸುನಿಲ್‌ ಕುಮಾರ್‌, ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ. ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ ಎಂದು ಸಚಿವ ಸುನಿಲ್‌ ಕುಮಾರ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.  

- Advertisement -
spot_img

Latest News

error: Content is protected !!