Monday, April 29, 2024
Homeತಾಜಾ ಸುದ್ದಿ"ಮಂಗಳೂರಿನಲ್ಲಿರುವ ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ ಇಲ್ಲ"

“ಮಂಗಳೂರಿನಲ್ಲಿರುವ ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ ಇಲ್ಲ”

spot_img
- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಇರುವ ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯನ್ನು (PCIT) ಗೋವಾ ಕಚೇರಿಯೊಂದಿಗೆ ವಿಲೀನಗೊಳಿಸುವ ಅಥವಾ ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತಗೊಳಿಸುವ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನ ಆದಾಯ ತೆರಿಗೆ ಕಚೇರಿಯಲ್ಲಿ ಆದಾಯ ತೆರಿಗೆ ಪ್ರಧಾನ ಆಯುಕ್ತರ ಹುದ್ದೆ ಇದೆ. ಅದೇ ರೀತಿ ಗೋವಾದಲ್ಲೂ ಪ್ರಧಾನ ಆಯುಕ್ತರ ಹುದ್ದೆ ಇದೆ. ಈ ಎರಡು ಕಚೇರಿಯ ಹುದ್ದೆಯನ್ನು ಸೇರಿಸಿ ಒಂದೇ ಪ್ರಧಾನ ಆಯುಕ್ತರನ್ನು ನಿಯೋಜನೆ ಮಾಡಬೇಕು ಎಂಬ ಪ್ರಸ್ತಾಪ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರಧಾನ ಆಯುಕ್ತರ ಹುದ್ದೆ ಮಾತ್ರ ಗೋವಾಕ್ಕೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಆದರೆ ಇಡೀ ಕಚೇರಿ ಗೋವಾದ ಕಚೇರಿ ಜತೆಯಲ್ಲಿ ವಿಲೀನವಾಗುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದರೂ ಕೇಂದ್ರ ಸರಕಾರ ಕಚೇರಿಯನ್ನು ಸ್ಥಳಾಂತರಿಸುವ ತೀರ್ಮಾನ ಕೈಗೊಂಡಿರುವುದಕ್ಕೆ ತೆರಿಗೆದಾರರ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಪಿಸಿಐಟಿ ಕಚೇರಿಯನ್ನು ಮಂಗಳೂರಿನಲ್ಲಿಯೇ ಉಳಿಸಿಕೊಳ್ಳಲು ಜನಪ್ರತಿನಿಧಿಗಳು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂಬುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರು ಒಕ್ಕೊರಲ ಆಗ್ರಹಪಡಿಸಿದ್ದರು.

- Advertisement -
spot_img

Latest News

error: Content is protected !!