- Advertisement -
![]()
- Advertisement -
ಉಪ್ಪಿನಂಗಡಿ: ಓವರ್ ಟೇಕ್ ಮಾಡಲು ಹೋಗಿ ಕೆಎಸ್ಸಾರ್ಟಿಸಿ ಬಸ್ ಬೈಕ್ ಗೆ ಗುದ್ದಿದ ಪರಿಣಾ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನೆಕ್ಕಿಲಾಡಿಯ ಅಂಬೆಲದ ಬಳಿ ನಡೆದದೆ.
ವಿನೋದರ (57) ಎಂಬವರು ಗಾಯಗೊಂಡ ಬೈಕ್ ಸವಾರ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‍ಗೆ ತಾಗಿದ್ದು, ಆಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಬೈಕಿನೊಂದಿಗೆ ರಸ್ತೆಗೆ ಬಿದ್ದ ಬೈಕ್ ಸವಾರನ ಕೈಯ ಮೇಲೆ ಬಸ್‍ನ ಹಿಂಬದಿ ಚಕ್ರ ಹರಿದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
ಗಾಯಾಳುವನ್ನು ಪುತ್ತೂರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -


