Tuesday, July 14, 2026
Homeಕರಾವಳಿಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ಉದ್ಘಾಟನೆ

ಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ಉದ್ಘಾಟನೆ

- Advertisement -
- Advertisement -

ಮಂಗಳೂರು: ಮಾರ್ಚ್ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಶೈಲಿಯಲ್ಲಿ ರೂಪುಗೊಂಡಿರುವ ವಿಧಾನಸೌಧದ ಮುಖ್ಯ ದ್ವಾರವನ್ನು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಅವರು ಈ ಬಗ್ಗೆ ಶನಿವಾರದಂದು ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ವಿಧಾನಸೌಧದ ಮುಖ್ಯ ದ್ವಾರವನ್ನು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಮತ್ತು ಹೈಕೋರ್ಟ್ ಕಡೆಯಿಂದ ಪ್ರವೇಶ ದ್ವಾರಗಳನ್ನು ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ವಿಧಾನಸೌಧಕ್ಕೆ ಭಾಗಶಃ ವಿದ್ಯುತ್ ಪೂರೈಸುವ ಸೌರ ಫಲಕಗಳನ್ನು (ಸೋಲಾರ್ ಪ್ಯಾನೆಲ್) ಸಹ ಮಾರ್ಚ್ 25 ರಂದು ಉದ್ಘಾಟಿಸಲಾಗುವುದು ಎಂದು ಹೇಳಿದರು.

- Advertisement -

Latest News

error: Content is protected !!