ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಕಚೇರಿ ಹಾಗೂ ಸರ್ಕಾರ ಮಧ್ಯ ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ವಿಚಾರದಲ್ಲಿ ಅನಗತ್ಯವಾದ ಸಂಘರ್ಷ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಅವರು ರವಿವಾರದಂದು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಪ್ರಕರಣದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರವಾಗಿ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದ್ದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಇಲ್ಲಿ ಅದನ್ನ ಪಾಲನೆ ಮಾಡುವುದು ಒಳ್ಳೆಯದು ಬಸವರಾಜ ಹೊರಟ್ಟಿ ಅವರು ಸರ್ಕಾರದ ನಡೆ ವಿರೋಧಿಸಿ ವಿಸ್ತ್ರತ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲೆಡೆ ಭ್ರಷ್ಟಾಚಾರ, ಮತಾಂಧರ ಹಾವಳಿ ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ತನ್ನ ಹಿಡಿತವನ್ನು ಸಂಪೂರ್ಣವಾಗಿ ಕಳೆದುಕೊಳ್ಳುತ್ತಿದ್ದು ಇದಕ್ಕೆಲ್ಲ ಕಾಂಗ್ರೆಸ್ ನ ಒಳಜಗಳವೇ ಮುಖ್ಯ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.