- Advertisement -
- Advertisement -
ಉಡುಪಿ: ರಾಜ್ಯ ಮಟ್ಟದ ಶ್ರೀಕೃಷ್ಣ ಜಯಂತಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ನೃತ್ಯ ಸ್ಪರ್ಧೆ ಹಾಗೂ ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಬಹುಮಾನ ವಿತರಿಸಿದರು.
ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿಧ್ಯಾಸಾಗರ ತೀರ್ಥರು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
- Advertisement -