Thursday, June 4, 2026
Homeಅಪರಾಧಚಿಕ್ಕಮಗಳೂರು: ಚಾರ್ಮಾಡಿ ಘಾಟ್​​​ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ, ಕೊಲೆಯ ಶಂಕೆ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್​​​ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ, ಕೊಲೆಯ ಶಂಕೆ

- Advertisement -
- Advertisement -

ಚಿಕ್ಕಮಗಳೂರು: ಚಾರ್ಮಾಡಿ ಘಾಟ್​​​ನಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ನಾಪತ್ತೆಯಾಗಿದ್ದ ನಾಗೇಶ್ ಆಚಾರ್ (46) ಅವರನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ, ಇವರನ್ನು ಮಣ್ಣಿನಡಿ ಹೂತ್ತಿಟ್ಟಿದ್ದರು. 5 ದಿನಗಳ ಹಿಂದೆ ನಾಗೇಶ್ ರನ್ನ ಜೀಪಿನಲ್ಲಿ ಕರೆದುಕೊಂಡು ಹೋಗಿದ್ದ ಕೃಷ್ಣೇಗೌಡ ಎಂಬಾತನೇ ಕೊಲೆ ಮಾಡಿ, ಮಣ್ಣಿನಡಿ ಹೂತಿಟ್ಟು ಪೊಲೀಸರು, ಸ್ಥಳೀಯರ ಜೊತೆ ಸೇರಿಕೊಂಡು ಹುಡುಕಾಟದ ನಾಟಕವಾಡಿದ್ದ ಎಂದು ಹೇಳಲಾಗುತ್ತಿದೆ.

ಪೋಲೀಸರು, ಸಾರ್ವಜನಿಕರು ಚಾರ್ಮಾಡಿ ಅರಣ್ಯದ ಸುತ್ತಮುತ್ತ ಹುಡುಕಾಟ ನಡೆಸುತ್ತಿರುವ ವೇಳೆ ಮಂಗಳವಾರ ರಾತ್ರಿ ಅವರ ಮೃತದೇಹ ಚಾರ್ಮಾಡಿ ಅರಣ್ಯದಲ್ಲಿ ಪತ್ತೆಯಾಗಿದೆ.

ಕಾಣೆಯಾಗಿದ್ದ ವ್ಯಕ್ತಿಯ ಮೇಲೆ ಗಂಭೀರ ಗಾಯಗಳಾಗಿದ್ದು ಆತನನ್ನು ಟಾರ್ಪಾಲಿನಲ್ಲಿ ಸುತ್ತಿ ಗುಂಡಿ ತೆಗೆದು ಹೂಳಲಾಗಿದೆ. ಹಾಗೂ ಸ್ಥಳಕ್ಕೆ ಶ್ವಾನದಳ ಸಿಬ್ಬಂದಿ ಭೇಟಿ ತನಿಖೆ ನಡೆಸಿದ್ದಾರೆ.

ಚಾರ್ಮಾಡಿ ಘಾಟ್ ಅರಣ್ಯಕ್ಕೆ ಹೋಗಿದ್ದ ಮೂಡಿಗೆರೆ ಮೂಲದ ಬಾಳೂರು ಗ್ರಾಮದ ನಾಗೇಶ್ ಆಚಾರ್
ನಾಪತ್ತೆಯಾಗಿದ್ದರು.

ಇವರು ನಾಗೇಶ್ ಕಳೆದ ನಾಲ್ಕು ದಿನಗಳ ಹಿಂದೆ ಕೃಷ್ಣೇಗೌಡ ಎಂಬುವರ ಜೊತೆ ಜೀಪ್​ನಲ್ಲಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಕೆಲಸಕ್ಕೆಂದು ತೆರಳಿದ್ದರು. ಆದರೆ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದರು.

ಆದರೆ ಈಗ ಕರೆ ಮಾಡಿ ನಿಮ್ಮ ಗಂಡ ಇಲ್ಲ ಅಂತಾ ಹೇಳುತ್ತಿದ್ದಾರೆ ಎಂದು ನಾಗೇಶ್ ಆಚಾರ್ ಪತ್ನಿ ಕಣ್ಣೀರು ಹಾಕಿದ್ದಾರೆ.

ಈ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರುತಳ ಬಳಿ ನಡೆದಿದೆ. ಪ್ರಕರಣ ಸಂಬಂಧ ಕೃಷ್ಣೇಗೌಡ, ಉದಯ್, ಪ್ರದೀಪ್ ಎಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Latest News

error: Content is protected !!