Thursday, June 4, 2026
Homeಇತರನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ...! ಪುಂಜಾಲಕಟ್ಟೆ ಠಾಣೆಗೆ ದೂರು ದಾಖಲು...!

ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…! ಪುಂಜಾಲಕಟ್ಟೆ ಠಾಣೆಗೆ ದೂರು ದಾಖಲು…!

- Advertisement -
- Advertisement -

ಪುಂಜಾಲಕಟ್ಟೆ : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45)ಯವರು ಇಂದು ನೇಣುಬಿಗಿದ ಸ್ಥಿತಿಯಲ್ಲಿ ನಯನಾಡು ಪರಿಸರದದಲ್ಲಿ ಪತ್ತೆಯಾಗಿದ್ದಾರೆ.

ರಾಜೇಶ್ ಅವರು ನಯನಾಡಿನ ಹೋಟೆಲ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆಯಾಗಿದ್ದರು. ಈ ಬಗ್ಗೆ ಶುಕ್ರವಾರ ಮನೆ ಮಂದಿ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದರು.

ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಪಡಿಸಲಾಗಿತ್ತು. ಭಾನುವಾರ ಬೆಳಗ್ಗೆ ರಾಜೇಶ್ ಅವರ ಮೃತದೇಹ ನಯನಾಡಿನ ಖಾಸಗಿ ಜಮೀನಿನ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!