Friday, June 5, 2026
Homeತಾಜಾ ಸುದ್ದಿಪ್ರೀತಿಸಿ ಮದುವೆಯಾದ ನಾಲ್ಕು ತಿಂಗಳಲ್ಲೇ ನವದಂಪತಿ ಆತ್ಮಹತ್ಯೆ !

ಪ್ರೀತಿಸಿ ಮದುವೆಯಾದ ನಾಲ್ಕು ತಿಂಗಳಲ್ಲೇ ನವದಂಪತಿ ಆತ್ಮಹತ್ಯೆ !

- Advertisement -
- Advertisement -

ಮೈಸೂರು : ಮದುವೆಯಾಗಿ ನಾಲ್ಕು ತಿಂಗಳಲ್ಲೇ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ .

ಮೃತ ನವದಂಪತಿ ಗ್ರಾಮದ ರಾಕೇಶ್ ( 25 ) , ಅರ್ಚನಾ ( 20 ) ಎಂದು ಗುರುತಿಸಲಾಗಿದೆ.

ಇಬ್ಬರೂ ಒಂದೇ ಊರಿನ ಅಕ್ಕಪಕ್ಕದ ಮನೆಯವರಾಗಿದ್ದರು. ಇವರಿಬ್ಬರೂ ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು.

ಪೋಷಕರ ವಿರೋಧದ ನಡುವೆಯೂ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಗ್ರಾಮದ ಊರ ಹೊರವಲವಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ . ಈ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

- Advertisement -

Latest News

error: Content is protected !!