Friday, April 19, 2024
Homeತಾಜಾ ಸುದ್ದಿಶಾಲಾ, ಕಾಲೇಜು ವಿದ್ಯಾರ್ಥಿಗಳ ಗಮನಕ್ಕೆ: ಹಳೆಯ 'ವಿದ್ಯಾರ್ಥಿ ಬಸ್ ಪಾಸ್' ಅವಧಿ ಮಾ.31ರವರೆಗೆ ವಿಸ್ತರಣೆ

ಶಾಲಾ, ಕಾಲೇಜು ವಿದ್ಯಾರ್ಥಿಗಳ ಗಮನಕ್ಕೆ: ಹಳೆಯ ‘ವಿದ್ಯಾರ್ಥಿ ಬಸ್ ಪಾಸ್’ ಅವಧಿ ಮಾ.31ರವರೆಗೆ ವಿಸ್ತರಣೆ

spot_img
- Advertisement -
- Advertisement -

ಬೆಂಗಳೂರು: 2019-20ನೇ ಸಾಲಿನ ವಿದ್ಯಾರ್ಥಿ ಪಾಸ್ ಅವಧಿಯನ್ನು ದಿನಾಂಕ 31-03-2021ರವರೆಗೆ ವಿಸ್ತರಣೆ ಮಾಡಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಆದೇಶಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ವಿದ್ಯಾರ್ಥಿಗಳು 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಫೆಬ್ರವರಿ 28ರವರೆಗೆ ಅನುವು ಮಾಡಿಕೊಡಲಾಗಿತ್ತು. ಇದೀಗ ಶಾಲಾ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈ ಅವಧಿಯನ್ನು ಒಂದು ತಿಂಗಳವರೆಗೂ ವಿಸ್ತರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ರಾಜ್ಯ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.

ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕಳೆದ ವರ್ಷದ (2019-20ನೇ ಸಾಲಿನ) ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ-ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿಯನ್ನು ತೋರಿಸಿ, ಮಾರ್ಚ್ 31, 2021ರವರೆಗೆ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ತೆರಳಲು ಅವಕಾಶ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!