Thursday, June 4, 2026
Homeಕರಾವಳಿಪುತ್ತೂರು: ಗೃಹಪ್ರವೇಶವಾದ ಎರಡೇ ದಿನದಲ್ಲಿ ಯಜಮಾನ ಆತ್ಮಹತ್ಯೆಗೆ ಶರಣು

ಪುತ್ತೂರು: ಗೃಹಪ್ರವೇಶವಾದ ಎರಡೇ ದಿನದಲ್ಲಿ ಯಜಮಾನ ಆತ್ಮಹತ್ಯೆಗೆ ಶರಣು

- Advertisement -
- Advertisement -

ಪುತ್ತೂರು: ಸ್ವಗೃಹದ ಗೃಹಪ್ರವೇಶವಾದ ಎರಡೇ ದಿನದಲ್ಲಿ ಮನೆ ಯಜಮಾನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲಿನಲ್ಲಿ ನಡೆದಿದೆ. ಬೀರ್ನಹಿತ್ಲು ನಿವಾಸಿ ವಿಜಯ ಕುಮಾರ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಮನೆಯ ಹಿಂದುಗಡೆಯ ಶೆಡ್‌ನ‌ ಮೇಲ್ಛಾವಣಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗೆ ಲುಂಗಿಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇ 27ರಂದು ಮನೆಯ ಗೃಹಪ್ರವೇಶ ನಡೆದಿತ್ತು. ಮೇ 28ರಂದು ಅಮಲು ಪದಾರ್ಥ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಮೇ 29ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!