Saturday, June 6, 2026
Homeಕರಾವಳಿಕಡಬ ; ನೆಕ್ಕಿಲಾಡಿ ಗ್ರಾಮದ ಕೋರಿಯರ್ ನಲ್ಲಿ ವ್ಯಕ್ತಿ ಕುಮಾರಧಾರ ನದಿಗೆ ಹಾರಿರುವ ಶಂಕೆ

ಕಡಬ ; ನೆಕ್ಕಿಲಾಡಿ ಗ್ರಾಮದ ಕೋರಿಯರ್ ನಲ್ಲಿ ವ್ಯಕ್ತಿ ಕುಮಾರಧಾರ ನದಿಗೆ ಹಾರಿರುವ ಶಂಕೆ

- Advertisement -
- Advertisement -

ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂಬವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ನದಿ ಬದಿಯಲ್ಲಿ ಧರ್ಮಯ್ಯ ಅವರ ಶೂ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೌರ್ಯ ತಂಡದ ಸದಸ್ಯರು ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಧರ್ಮಯ್ಯ ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!