Thursday, June 4, 2026
Homeಕರಾವಳಿಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ಬೋಟಿನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ಬೋಟಿನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಸಮಯದಲ್ಲಿ ಕಾರ್ಮಿಕನೊಬ್ಬ ಬೋಟ್ ನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಬಂದರ್ ಢಕ್ಕೆಯಲ್ಲಿ ನಿನ್ನೆ ಸಂಜೆ ವೇಳೆ ಸಂಭವಿಸಿದೆ.

ಮೃತ ಮೀನುಗಾರನನ್ನು ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಬೋಟಿನಲ್ಲಿ‌ ಮೀನುಗಾರಿಕೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದು, ಹುಡುಕಾಡಿದರೂ ಪತ್ತೆಯಾಗಿರಲಿಲ್ಲ.

ಡಿ.01 ರ ಬೆಳಗ್ಗೆ ಮಲ್ಲಪಲ್ಲಿ ಅಪ್ಪಯ್ಯ ಅವರ ಮೃತದೇಹ ಬಂದರ್ ದಕ್ಕೆಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!