Monday, June 8, 2026
Homeಕರಾವಳಿಬಂಟ್ವಾಳ; ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ ಪೊಲೀಸರು

ಬಂಟ್ವಾಳ; ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ: ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಬಂಧಿಸಿರುವ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ . ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ.

ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತೃತ್ವದಲ್ಲಿ ದಾಳಿ ನಡೆದಿದ್ದು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ  2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!