Thursday, June 4, 2026
Homeಕರಾವಳಿಸುಳ್ಯ: ಅಕ್ರಮ ದನ ಸಾಗಾಟ...! ಓಮ್ನಿ ಕಾರು ಸಮೇತ ಓರ್ವನ ಬಂಧನ...!

ಸುಳ್ಯ: ಅಕ್ರಮ ದನ ಸಾಗಾಟ…! ಓಮ್ನಿ ಕಾರು ಸಮೇತ ಓರ್ವನ ಬಂಧನ…!

- Advertisement -
- Advertisement -

ಸುಳ್ಯ: ಸುಳ್ಯ ನಗರ ಜಟ್ಟಿಪಳ್ಳ ಸಮೀಪ ಅಕ್ರಮವಾಗಿ ಎರಡು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಸುಳ್ಯ ಪೊಲೀಸರು ದನಗಳನ್ನು ಸಾಗಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಓರ್ವನನ್ನು ಬಂಧಿಸಿದ ಪ್ರಕರಣ ಭಾನುವಾರ ರಾತ್ರಿ ಸುಳ್ಯದಲ್ಲಿ ನಡೆದಿದೆ.

ತಪ್ಪಿಸಿಕೊಳ್ಳುವ ಭರದಲ್ಲಿ ಅಕ್ರಮ ದನ ಸಾಗಾಟಗಾರರ ವಾಹನ ಮನೆಯೊಂದರ ಕಂಪೌಂಡಿಗೆ ಗುದ್ದಿದ್ದು ಈ ಸಂದರ್ಭದಲ್ಲಿ ಕಾರಿನಲ್ಲಿ ಮೂರು ಮಂದಿ ಇದ್ದರು ಎನ್ನಲಾಗಿದೆ. ಈ ವೇಳೆ ಚಾಲಕ ಕಾರಿನಿಂದಿಳಿದು ಪರಾರಿಯಾದಾಗ ಕಾರು ಹಿಂಬದಿ ಚಲಿಸಿ ಗೋಡೆಗೆ ತಾಗಿ ನಿಂತಿತು. ಅಷ್ಟರಲ್ಲಿ ಅಲ್ಲಿ ಜಮಾಯಿಸಿದವರು ಆರೋಪಿಗಳನ್ನು ಹಿಡಿಯಲು ಯತ್ನಿಸಿದಾಗ ಮೂವರಲ್ಲಿ ಇಬ್ಬರು ಪರಾರಿಯಾಗಿ ಒಬ್ಬ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆತನ ಮೇಲೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಸ್ಥಳದಲ್ಲಿ ಬಜರಂಗದಳ ಕಾರ್ಯಕರ್ತರು ಮತ್ತು ಸ್ಥಳೀಯರು ಸೇರಿದ್ದರು. ಓಮ್ನಿ ಕಾರನ್ನು ಜಾನುವಾರು ಸಮೇತ ಪೋಲೀಸ್ ಠಾಣೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!