Sunday, October 18, 2026
Homeಕರಾವಳಿಉಪ್ಪಿನಂಗಡಿ: ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಉಪ್ಪಿನಂಗಡಿ: ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಪ್ಪಿನಂಗಡಿ: ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಗಾಂಜಾ ಸಹಿತ ಪೊಲೀಸರು ಬಂಧಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಚಾಲಕ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅಬ್ದುಲ್‌ ಸಲೀಂ (35) ಬಂಧಿತ.

ಎಸ್‌ಐ ಅವಿನಾಶ್‌ ಎಚ್‌. ಮತ್ತವರ ತಂಡ 34ನೇ ನೆಕ್ಕಿಲಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳದ ಕಡೆಯಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ರಿಕ್ಷಾವನ್ನು ನಿಲ್ಲಿಸಲು ಸೂಚಿಸಲಾಗುತ್ತದೆ. ಆದರೆ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ ಅಬ್ದುಲ್‌ ಸಲೀಂನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸಾಗಿಸುತ್ತಿದ್ದುದು ಗೊತ್ತಾಗಿದೆ. ನೌಶಾದ್‌ ಎಂಬಾತ ತನಗೆ ಗಾಂಜಾ ನೀಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

- Advertisement -

Latest News

error: Content is protected !!