‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ನಾಯಕ-ನಾಯಕಿಯಾಗಿ ಅಭಿನಯಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರ ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಆಗಸ್ಟ್ 22ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ABBS Studios ಲಾಂಛನದಲ್ಲಿ ಸಿ.ಆರ್.ಬಾಬಿ ಮತ್ತು ಅಜನೀಶ್ ಲೋಕನಾಥ್ ನಿರ್ಮಿಸಿರುವ ಜೊತೆಗೂಡಿ ನಿರ್ಮಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವನ್ನು ಸಂಗೀತ ನಿರ್ದೇಶಕ ಸಿ.ಆರ್.ಬಾಬಿ ಅವರು ನಿರ್ದೇಶಿಸುತ್ತಿದ್ದಾರೆ. ಹೆಸರಾಂತ ಸಿನಿಮಾ ವಿತರಣಾ ಸಂಸ್ಥೆಯಾದ ವಿ.ಕೆ.ಫಿಲಂಸ್ ವಿಶಾಲ ಕರ್ನಾಟಕಕ್ಕೆ ಈ ಚಿತ್ರವನ್ನು ವಿತರಣೆ ಮಾಡಲಿದೆ.
ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆ ಬರೆದಿದ್ದಾರೆ.
ಚಿತ್ರದಲ್ಲಿ ನಟರಾದ ದೇವರಾಜ್, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತಾ ಅನಿಲ್ ಮುಂತಾದವರು ನಟಿಸಿದ್ದಾರೆ.
ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿ ಜನಪ್ರಿಯವಾಗಿದ್ದು, ಸದ್ಯದಲ್ಲೇ ಟ್ರೇಲರ್ ಹೊರಬೀಳಲಿದೆ.


