Wednesday, June 26, 2024
Homeತಾಜಾ ಸುದ್ದಿಏರಿಕೆಯತ್ತ ಮುಖ ಮಾಡಿದ ಚಿನ್ನದ ದರ!.. ದೀಪಾವಳಿಗೆ ಚಿನ್ನ ಕೈಗೆಟುಕುತ್ತಾ?

ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ!.. ದೀಪಾವಳಿಗೆ ಚಿನ್ನ ಕೈಗೆಟುಕುತ್ತಾ?

spot_img
- Advertisement -
- Advertisement -

ಬೆಂಗಳೂರು: ಕೊರೋನಾ ಅಟ್ಟಹಾಸದಿಂದ ಜಗತ್ತು ನಿಧಾನವಾಗಿ ಚೇತರಿಕೆ ಕಾಣುತ್ತಿದೆ. ಅದರ ಬೆನ್ನಲ್ಲೇ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಈ ಮಧ್ಯೆ ಚಿನ್ನದ ಬೆಲೆ ಏರಿಳಿತ ಕಾಣುತ್ತಿದೆ. ಕಳೆದ ಸೋಮವಾರದಿಂದ ಶನಿವಾರದವರೆಗೆ ಚಿನ್ನದ ದರ ಕೊಂಚ ಇಳಿಕೆಕಂಡು ಏರಿಕೆಯ ಹಾದಿ ತುಳಿದಿದೆ ಆ ಮೂಲಕ 10ಗ್ರಾಂ ಆಭರಣ ಚಿನ್ನ ಕಳೆದ ವಾರ ಒಟ್ಟು 670 ರೂಪಾಯಿ ಏರಿಕೆ ಕಂಡಂತಾಗಿದೆ.

10 ಗ್ರಾಂ ಚಿನ್ನ 47,600 ರೂಪಾಯಿ ಆಗಿದೆ. ಶುದ್ಧ ಚಿನ್ನದ ದರ 10 ಗ್ರಾಂಗೆ 370 ರೂಪಾಯಿ ಏರಿಕೆ ಆಗಿದೆ. ಈ ಮೂಲಕ 51, 900 ರೂಪಾಯಿ ಆಗಿದೆ. ಕಳೆದ ವಾರ ಬೆಳ್ಳಿ ದರ 3 ದಿನ ಇಳಿಕೆ ಹಾಗೂ 4 ದಿನ ಏರಿಕೆ ಕಂಡಿದೆ.

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಾಣಲಿದೆ ಎನ್ನಲಾಗುತ್ತಿದ್ದು, ಜನರಿಗೆ ಬೇರೆಲ್ಲೂ ಹೂಡಿಕೆ ಮಾಡಲು ಅವಕಾಶ ಸಿಗುತ್ತಿಲ್ಲ ಹೀಗಾಗಿ, ಚಿನ್ನದ ಮೇಲೆ ಹೂಡಿಕೆಯಾಗಿ ಚಿನ್ನದ ದರದಲ್ಲಿ ಏರಿಕೆ ಕಾಣುತ್ತಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!