- Advertisement -
![]()
- Advertisement -
ಮಂಗಳೂರು; ಸಾಮಾಜಿಕ ಹೋರಾಟಗಾರ, ವಿಚಾರವಾದಿ ಸಂಘಟನೆಗಳ ರಾಷ್ಟ್ರೀಯ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್ ಅವರಿಗೆ ಕಳೆದ ಏಳು ವರ್ಷದಿಂದ ಪೊಲೀಸ್ ಇಲಾಖೆಯ ವತಿಯಿಂದ ನೀಡಲಾಗುತ್ತಿದ್ದ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ.
ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿದ್ದ ನರೇಂದ್ರ ನಾಯಕ್‌ಗೆ ಬೆದರಿಕೆ ಕರೆಗಳು ಬರತೊಡಗಿದ ಬಳಿಕ ಮುನ್ನೆಚ್ಚರಿಕೆಯ ಕ್ರಮವಾಗಿ ಚಂದ್ರಶೇಖರ್ ನಗರ ಪೊಲೀಸ್ ಆಯುಕ್ತರಾಗಿದ್ದಾಗ ಇಬ್ಬರು ಅಂಗರಕ್ಷಕರ ಮೂಲಕ ಭದ್ರತೆ ಒದಗಿಸಿದ್ದರು.
ಹಗಲು-ರಾತ್ರಿ ಪಾಳಿಯಲ್ಲಿ ರಕ್ಷಣೆ ನೀಡುತ್ತಿದ್ದ ಈ ಇಬ್ಬರು ಪೊಲೀಸರು ಬುಧವಾರ ರಾತ್ರಿಯಿಂದ ಕರ್ತವ್ಯಕ್ಕೆ ಹಾಜರಾಗಲಿಲ್ಲ. ಆ ಮೂಲಕ ಹಿರಿಯ ಪೊಲೀಸ್ ಅಧಿಕಾರಿಗಳು ಸಕಾರಣ ನೀಡದೆ ಅಂಗರಕ್ಷಕರನ್ನು ವಾಪಸ್ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
- Advertisement -


