- Advertisement -
- Advertisement -
ಬೆಂಗಳೂರು:ಇಲ್ಲಿನ ಲಗ್ಗೆರೆ ಬಳಿಯ ಕೂಲಿನಗರ ಬ್ರಿಡ್ಜ್ ಬಳಿ ನಂದಿನಿ ಲೇಔಟ್ ಪೊಲೀಸರು ಬೆಳ್ಳಂಬೆಳಗ್ಗೆ ಫೈರಿಂಗ್ ಮಾಡಿದ್ದಾರೆ. ದರೋಡೆ ಆರೋಪಿ ಮೇಲೆ ಫೈರಿಂಗ್ ನಡೆಸಲಾಗಿದೆ. ಕಾಲಿಗೆ ಗುಂಡು ಹಾರಿಸಿ ಆರೋಪಿ ಅನುಬನ್ ನನ್ನು ಬಂಧಿಸಲಾಗಿದೆ. ನವೆಂಬರ್ 26 ರಂದು ರಿಂಗ್ ರಸ್ತೆ ಬಳಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿತ್ತು. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಇಂದು ಬೆಳಗ್ಗೆ ಅನುಬನ್ ನನ್ನು ಬಂಧಿಸಲು ತೆರಳಿದ್ದ ವೇಳೆ ಹೆಡ್ ಕಾನ್ ಸ್ಟೇಬಲ್ ಅಭಿಷೇಕ್ ಮೇಲೆ ಡ್ರ್ಯಾಗರ್ ನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗೆ ಪೊಲೀಸ್ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದು ಗುಂಡೇಟು ತಗುಲಿದ ಅನುಬನ್ ನನ್ನು ವಶಕ್ಕೆ ಪಡೆಯಲಾಗಿದೆ.ಚಿಕಿತ್ಸೆ ನಂತರ ಈತನ ವಿಚಾರಣೆ ಮುಂದುವರಿಯಲಿದೆ.
- Advertisement -