Thursday, May 2, 2024
Homeಕರಾವಳಿಮಂಗಳೂರು: ಮೇಕೆದಾಟು ಪಾದಯಾತ್ರೆಯ ಹಳಿತಪ್ಪಿಸಲು ರಾಜ್ಯ ಸರಕಾರ ವಾರಾಂತ್ಯ ಕರ್ಫ್ಯೂ ವಿಧಿಸಿದೆ: ಐವನ್ ಡಿಸೋಜ

ಮಂಗಳೂರು: ಮೇಕೆದಾಟು ಪಾದಯಾತ್ರೆಯ ಹಳಿತಪ್ಪಿಸಲು ರಾಜ್ಯ ಸರಕಾರ ವಾರಾಂತ್ಯ ಕರ್ಫ್ಯೂ ವಿಧಿಸಿದೆ: ಐವನ್ ಡಿಸೋಜ

spot_img
- Advertisement -
- Advertisement -

ಮಂಗಳೂರು: ಸಾರ್ವಜನಿಕರ ಹಿತದೃಷ್ಟಿಯಿಂದ ಯೋಜನೆ ಜಾರಿಗಾಗಿ ಆಗ್ರಹಿಸಿ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯ ಹಳಿತಪ್ಪಿಸಲು ರಾಜ್ಯ ಸರಕಾರ ವಾರಾಂತ್ಯ ಕರ್ಫ್ಯೂ ವಿಧಿಸಿದೆ ಎಂದು ಮಾಜಿ ಎಂ ಎಲ್ ಸಿ ಐವನ್ ಡಿಸೋಜ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಮತ್ತು ಓಮಿಕ್ರಾನ್‌ನ ನೆಪದಲ್ಲಿ ಬಿಜೆಪಿ ತಮ್ಮ ನಿರ್ಧಾರದಲ್ಲಿ ದ್ವಿಗುಣವನ್ನು ತೋರಿಸುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಸರ್ಕಾರ ಬೇರೆ ಬೇರೆ ನಿಯಮಗಳನ್ನು ಹೇರುತ್ತಿದೆ. ಇಲ್ಲಿಯವರೆಗೆ, ಬಿಜೆಪಿ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ರ್‍ಯಾಲಿಗಳನ್ನು ನಡೆಸಿದೆ. ಕಾಂಗ್ರೆಸ್ ಜನ ಪರವಾಗಿ ಕಾಲ್ನಡಿಗೆ ಜಾಥಾವನ್ನು ಕೈಗೊಳ್ಳಲು ನಿರ್ಧರಿಸಿದಾಗ, ಸರ್ಕಾರವು ವಾರಾಂತ್ಯದ ಕರ್ಫ್ಯೂ ವಿಧಿಸುತ್ತದೆ. ಇದು ತಜ್ಞರ ಸಮಿತಿ ತೆಗೆದುಕೊಂಡ ನಿರ್ಧಾರವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು “ವಾರಾಂತ್ಯ ಕರ್ಫ್ಯೂ ಕುರಿತು ರಾಜ್ಯ ಸರ್ಕಾರದ ನಿರ್ಧಾರದಿಂದ ಸಚಿವ ಈಶ್ವರಪ್ಪ ಅಸಮಾಧಾನಗೊಂಡಿದ್ದು, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಡೆದ ಕಾಲ್ನಡಿಗೆ ಜಾಥಾ ಜನಬೆಂಬಲ ಪಡೆದ ಸಲುವಾಗಿ ಬಿಜೆಪಿಗೆ ಇದನ್ನು ಅರಗಿಸಿಕೊಳ್ಳಲಾಗಲಿಲ್ಲ. ಆದ್ದರಿಂದ ಪಾದಯಾತ್ರೆಯನ್ನು ಹಳಿತಪ್ಪಿಸಲು ವಾರಾಂತ್ಯದ ಕರ್ಫ್ಯೂ ವಿಧಿಸಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರವು ನಮ್ಮ ಪಾದಯಾತ್ರೆಯನ್ನು ತಡೆಯಲು ಮುಂದಾದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಯೋಜಿಸಿದಂತೆ ನಾವು ನಮ್ಮ ಪಾದಯಾತ್ರೆಯನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!