Friday, April 26, 2024
Homeತಾಜಾ ಸುದ್ದಿಕನ್ನಡಾಂಬೆಯ ಭಾವಚಿತ್ರ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಕನ್ನಡಾಂಬೆಯ ಭಾವಚಿತ್ರ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

spot_img
- Advertisement -
- Advertisement -

ಕನ್ನಡಾಂಬೆಗೆ ನಿರ್ದಿಷ್ಟವಾದ ಚಿತ್ರ ಇಲ್ಲದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಮಾತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿದೆ. ಈ ಮೂಲಕ ನಾಡ ದೇವಿಯ ಭಾವಚಿತ್ರ ಗೊಂದಲಕ್ಕೆ ರಾಜ್ಯ ಸರ್ಕಾರ ಕೊನೆಗೂ ತೆರೆ ಎಳೆದಿದೆ. ನಾಡದೇವಿ ಕನ್ನಡಾಂಬೆಯ ಪ್ರಮಾಣಿತ ಮತ್ತು ಅಧಿಕೃತ ಭಾವಚಿತ್ರಕ್ಕೆ ಸರ್ಕಾರ ಅನುಮೋದನೆ ನೀಡಿದೆ.

ಈ ಮೂಲಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ನೀಡಿದ್ದ ಶಿಫಾರಸ್ಸುಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಅದರಂತೆ ಈಗ ಕರ್ನಾಟಕದ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಚಿತ್ರವನ್ನು ಐವರು ಕಲಾವಿದರ ಸಮಿತಿಯ ಶಿಫಾರಸುಗಳನ್ನು ಒಪ್ಪಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಆದೇಶ ಹೊರಬೀಳಲಿದೆ. ಅಲ್ಲದೆ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಶಾಲಾ ಕಾಲೇಜುಗಳ ಗೋಡೆಯ ಮೇಲೆ ಈ ಚಿತ್ರವನ್ನೇ ಕಡ್ಡಾಯವಾಗಿ ಬಳಸಬೇಕು ಎಂಬ ಆದೇಶವೂ ಹೊರ ಬೀಳಲಿದೆ.

- Advertisement -
spot_img

Latest News

error: Content is protected !!