Tuesday, July 1, 2025
Homeತಾಜಾ ಸುದ್ದಿದೇವಸ್ಥಾನಗಳಲ್ಲಿನ ಗಂಟೆ, ಜಾಗಟೆ, ಧ್ವನಿ ವರ್ಧಕ ಬಳಸದಂತೆ ರಾಜ್ಯ ಸರ್ಕಾರ ಆದೇಶ

ದೇವಸ್ಥಾನಗಳಲ್ಲಿನ ಗಂಟೆ, ಜಾಗಟೆ, ಧ್ವನಿ ವರ್ಧಕ ಬಳಸದಂತೆ ರಾಜ್ಯ ಸರ್ಕಾರ ಆದೇಶ

spot_img
- Advertisement -
- Advertisement -

ಬೆಂಗಳೂರು: ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಅನೇಕ ಕಡೆಗಳಲ್ಲಿ ಬ್ರೇಕ್ ಹಾಕಲಾಗಿದೆ. ಈಗ ರಾಜ್ಯ ಸರ್ಕಾರ ವಿವಿಧ ದೇವಸ್ಥಾನಗಳಲ್ಲಿನ ಗಂಟೆ, ಜಾಗಟೆ, ಧ್ವನಿ ವರ್ಧಕ ಬಳಸದಂತೆ ನಿರ್ಬಂಧ ವಿಧಿಸಿದೆ.

ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದ್ದು, ದೇವಸ್ಥಾನಗಳಲ್ಲಿ ನಿಗಧಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತ ಗಂಟೆ, ಜಾಗಟೆ, ಧ್ವನಿವರ್ಧಕ ಬಳಸದಂತೆ ಸೂಚಿಸಿದೆ.

ಇನ್ನೂ ದೇವಸ್ಥಾನಗಳಲ್ಲಿನ ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು ಮಾಡಲಾಗುತ್ತಿರೋದಕ್ಕೆ, ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ ಶಬ್ದ ಹೊರಡಿಸಲಾಗುತ್ತಿದೆ. ಇದು ಹೆಚ್ಚಿನ ಡೆಸಿಬಲ್ ಶಬ್ದವನ್ನು ಹೊರಸೂಸುತ್ತಿವೆ. ಇವುಗಳನ್ನು ಬಳಕೆ ಮಾಡದಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ರಾಜ್ಯ ಧಾರ್ಮಿಕ ಇಲಾಖೆ ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯ, ಕಲಾಸಿಪಾಳ್ಯದ ಮಿಂಟೋ ಆಂಜನೇಯ ದೇಗುಲ, ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನ, ದೊಡ್ಡಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಗಂಟೆನಾಧಕ್ಕೆ ಬ್ರೇಕ್ ಹಾಕುವಂತೆ ನೋಟಿಸ್ ನಲ್ಲಿ ಸೂಚಿಸಿದೆ.

- Advertisement -
spot_img

Latest News

error: Content is protected !!