Wednesday, June 3, 2026
Homeಕರಾವಳಿಶಾಸಕ ಹರೀಶ್ ಪೂಂಜರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಒಡ್ಡಿದ ಪ್ರಕರಣ ;ಕೇಸನ್ನು ಸಿಐಡಿ ತನಿಖೆಗೆ ವಹಿಸಿ...

ಶಾಸಕ ಹರೀಶ್ ಪೂಂಜರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಒಡ್ಡಿದ ಪ್ರಕರಣ ;ಕೇಸನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

- Advertisement -
- Advertisement -

ಬೆಂಗಳೂರು : ರಾಜ್ಯ ಸರ್ಕಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ತಡೆದು ಬೆದರಿಕೆ ಒಡ್ಡಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ತಡೆದು ಬೆದರಿಕೆ ಒಡ್ಡಿದ ಆರೋಪಿ ರಿಯಾಜ್ ನನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಎಂಬ ಸತ್ಯ ಹೊರಬರಬೇಕು ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಕೆಲ ದಿನಗಳ ಹಿಂದೆ ಶಾಸಕ ಹರೀಶ್ ಪೂಂಜ ಕಾರನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಶಾಸಕರಿದ್ದ ಕಾರು ತಡೆದು ಆರೋಪಿ ರಿಯಾಜ್ ಅವಾಚ್ಯವಾಗಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

- Advertisement -

Latest News

error: Content is protected !!