Thursday, June 4, 2026
Homeಕರಾವಳಿಉಡುಪಿಉಡುಪಿಯಲ್ಲಿ ಇಂದಿನಿಂದ ಎರಡು ದಿನಗಳ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ

ಉಡುಪಿಯಲ್ಲಿ ಇಂದಿನಿಂದ ಎರಡು ದಿನಗಳ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ

- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಇಂದಿನಿಂದ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ ನಡೆಯಲಿದೆ. ಇಂದು ಮತ್ತು ನಾಳೆ ಉಡುಪಿಯ ಎಂ.ಜಿ.ಎ. ಕಾಲೇಜು ಆವರಣದಲ್ಲಿ ಸಮ್ಮೇಳನ ನಡೆಯಲಿದೆ.

ಉಡುಪಿಯ ಎಂಜಿಯ ಕಾಲೇಜು ಆವರಣದಲ್ಲಿ ಯಕ್ಷಗಾನ ಸಮ್ಮೇಳನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಚಾಲನೆ ನೀಡಲಿದ್ದಾರೆ. ಯಕ್ಷಗಾನ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಈ ಸಮ್ಮೇಳನ ಉದ್ಘಾಟನೆಗೂ ಮುನ್ನ ಸಮ್ಮೇಳನಾಧ್ಯಕ್ಷ ಹಾಗೂ ಯಕ್ಷಗಾನ ರಂಗದ ವಿದ್ವಾಂಸ ಡಾ.ಪ್ರಭಾಕರ ಜೋಶಿ ಮತ್ತು ಗಣ್ಯರನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುತ್ತದೆ.

ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನೆ ಕಾರ್ಯಕ್ರಮದ ವೇಳೆ ಯಕ್ಷಗಾನಕ್ಕೆ ಸಂಬಂಧಿಸಿದ 18 ಕೃತಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಅಂಕಣಕಾರ ರೋಹಿತ್ ಚಕ್ರತೀರ್ಥ, ಜ್ಞಾನಪೀಠ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಭಾಗಿಯಾಗಲಿದ್ದಾರೆ.

- Advertisement -

Latest News

error: Content is protected !!