Thursday, June 4, 2026
Homeತಾಜಾ ಸುದ್ದಿವಿಟ್ಲ: ಕನ್ಯಾನ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಆಗ್ರಹಿಸಿ ಸಚಿವರ ಬಳಿ ಮನವಿ ಮಾಡಿದ್ದ...

ವಿಟ್ಲ: ಕನ್ಯಾನ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಆಗ್ರಹಿಸಿ ಸಚಿವರ ಬಳಿ ಮನವಿ ಮಾಡಿದ್ದ ವಿ.ಹಿಂ.ಪ: ಮನವಿಗೆ ಸ್ಪಂದಿಸಿದ ಸಚಿವ ಸುನಿಲ್‌ ಕುಮಾರ್

- Advertisement -
- Advertisement -

ವಿಟ್ಲ: ಇತ್ತೀಚಿಗೆ ಕನ್ಯಾನದಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಲವ್ ಜಿಹಾದ್‌ಗೆ ಬಾಲಕಿ ಬಲಿಯಾಗಿದ್ದಾಳೆ ಎಂದು ಆರೋಪಿಸಿದ್ದು ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ವಿಟ್ಲದ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ಅಪ್ರಾಪ್ತ ಬಾಲಕಿ ಆತ್ಮಿಕಾ ಸಾವು ಬಗ್ಗೆ ಸಿಐಡಿ ತನಿಖೆಗೆ ಆಗ್ರಹಿಸಿ ಹಾಗೂ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ವಿಶ್ವ ಹಿಂದೂ ಪರಿಷತ್‌ನ ಪ್ರಮುಖರು ಸಚಿವ ವಿ ಸುನಿಲ್ ಕುಮಾರ್‌ ಅವರ ಬಳಿ ಮನವಿಯನ್ನು ಮಾಡಿದ್ರು.

ಇದಕ್ಕೆ ಸ್ಪಂದಿಸಿದ ಸಚಿವ ಸುನಿಲ್‌ ಕುಮಾರ್‌ ಪತ್ರದ ಮುಖೇನ ಮಾಹಿತಿ ನೀಡಿದ್ದಾರೆ. ಭೇಟಿಯಲ್ಲಿ ತಾವು ಅಪ್ರಾಪ್ತ ಬಾಲಕಿ ಆತ್ಮಿಕಾ ಸಾವು ಬಗ್ಗೆ ಸಿಐಡಿ ತನಿಖೆಗೆ ಆಗ್ರಹಿಸಿ ಹಾಗೂ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ಮನವಿಯನ್ನು ನೀಡಿರುತ್ತೀರಿ. ತಾವು ಸಲ್ಲಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದ್ದು ತಮ್ಮಲ್ಲಿರುವ ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಈ ಮನವಿಯನ್ನು ಪುರಸ್ಕರಿಸಿದ ಸಚಿವ ತನಗೆ ಸಲ್ಲಿಸಿದ ಮನವಿಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದೆ. ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದ್ದೇನೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

- Advertisement -

Latest News

error: Content is protected !!