Wednesday, June 24, 2026
Homeತಾಜಾ ಸುದ್ದಿಹಿಜಾಬ್ ನಿಷೇಧ: ವಿಚಾರಣೆ ಸೆಪ್ಪೆಂಬರ್ 7ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ಹಿಜಾಬ್ ನಿಷೇಧ: ವಿಚಾರಣೆ ಸೆಪ್ಪೆಂಬರ್ 7ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

- Advertisement -
- Advertisement -

ನವದೆಹಲಿ: ಹಿಜಾಬ್‌ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೆ.7 ಕ್ಕೆ ಮುಂದೂಡಿದೆ.

ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್  ಧರಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಆರಂಭಿಸಿದೆ. ಉಡುಪಿಯ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಬಾಲಕಿಯರು ತರಗತಿಯಲ್ಲಿ ಹಿಜಾಬ್ ಧರಿಸುವ ಹಕ್ಕು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಪೂರ್ಣ ಪೀಠ ಮಾರ್ಚ್ 15ರಂದು ವಜಾಗೊಳಿಸಿತ್ತು. ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯವು ಸಮಂಜಸವಾದ ನಿರ್ಬಂಧಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಹೇಳಿತ್ತು.

- Advertisement -

Latest News

error: Content is protected !!