Thursday, March 28, 2024
Homeತಾಜಾ ಸುದ್ದಿಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿಗೆ ಕೋರಿದ್ದ ಅರ್ಜಿ ನಿರಾಕರಿಸಿದ ಸುಪ್ರೀಂಕೋರ್ಟ್‌

ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿಗೆ ಕೋರಿದ್ದ ಅರ್ಜಿ ನಿರಾಕರಿಸಿದ ಸುಪ್ರೀಂಕೋರ್ಟ್‌

spot_img
- Advertisement -
- Advertisement -

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ವಸ್ತ್ರ ಸಂಹಿತೆ ಜಾರಿಗೊಳಿಸಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಈ ಪಿಐಎಲ್ ಸಲ್ಲಿಸಲಾಗಿತ್ತು.

ಸಮಾನತೆ, ಭ್ರಾತೃತ್ವ ಮತ್ತು ರಾಷ್ಟ್ರೀಯ ಏಕತೆಯನ್ನು ಉತ್ತೇಜಿಸಲು ಡ್ರೆಸ್ ಕೋಡ್ ಜಾರಿಗೊಳಿಸಬೇಕು ಎಂದು ಪಿಐಎಲ್​ನಲ್ಲಿ ವಾದಿಸಲಾಗಿದೆ. ಅರ್ಜಿದಾರ ನಿಖಿಲ್ ಉಪಾಧ್ಯಾಯ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಇದೊಂದು ಸಾಂವಿಧಾನಿಕ ಸಮಸ್ಯೆಯಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ನಿರ್ದೇಶನ ನೀಡುವಂತೆ ಕೋರಿದ್ದರು. ಆದರೆ ಪಿಐಎಲ್​ ಅನ್ನು ವಿಚಾರಣೆಗೆ ಸ್ವೀಕರಿಸಲು ನ್ಯಾಯಪೀಠ ಒಪ್ಪದ ಕಾರಣ ಆರ್ಜಿದಾರರು ಅರ್ಜಿಯನ್ನು ಹಿಂಪಡೆದರು.

- Advertisement -
spot_img

Latest News

error: Content is protected !!