Thursday, May 9, 2024
Homeತಾಜಾ ಸುದ್ದಿಬೆಳ್ತಂಗಡಿ ನ್ಯಾಯಾಲಯದ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್:‌ ಸೋಮನಾಥ್‌ ನಾಯಕ್‌ ಬಂಧನ ಖಚಿತ

ಬೆಳ್ತಂಗಡಿ ನ್ಯಾಯಾಲಯದ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್:‌ ಸೋಮನಾಥ್‌ ನಾಯಕ್‌ ಬಂಧನ ಖಚಿತ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅಪೀಲು ಸಲ್ಲಿಸಿದ್ದ ಸೋಮನಾಥ್‌ ನಾಯಕ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದ್ದು, ಬೆಳ್ತಂಗಡಿ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಗೌರವಕ್ಕೆ ಚ್ಯುತಿ ತರುವ ಯಾವುದೇ ರೀತಿಯ ಬರವಣಿಗೆ ಅಥವಾ ಹೇಳಿಕೆ ನೀಡಬಾರದೆಂದು ಈ ಹಿಂದೆ ಬೆಳ್ತಂಗಡಿ ಸಿವಿಲ್ ನ್ಯಾಯಾಲಯವು ಸೋಮನಾಥ ನಾಯಕ್ ಮತ್ತು ಇತರ 5 ಮಂದಿಯ ವಿರುದ್ಧ ಪ್ರತಿಬಂಧಕಾಜ್ಞೆ ಮಾಡಿತ್ತು. ಆದ್ರೆ ಸೋಮನಾಥ್‌ ನಾಯಕ್‌  ನ್ಯಾಯಾಲಯದ ಆದೇಶಕ್ಕೆ ಗೌರವ ನೀಡದೆ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಲೇ ಇದ್ರು ಎಂದು ದೂರಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬೆಳ್ತಂಗಡಿ ನ್ಯಾಯಾಲಯ ಸೋಮನಾಥ್‌ ನಾಯಕ್‌ಗೆ  3 ತಿಂಗಳ ಸಜೆ ಅಲ್ಲದೆ ಧರ್ಮಸ್ಥಳ ಕ್ಷೇತ್ರಕ್ಕೆ 4.5 ಲಕ್ಷ ರೂ. ಪರಿಹಾರ ನೀಡಬೇಕು ಎಂಬ ಆದೇಶವನ್ನು ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ಕೂಡಾ ಈ ಆದೇಶ ಎತ್ತಿಹಿಡಿದಿದ್ದು, ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸೋಮನಾಥ ನಾಯಕ್ ಬಂಧನ ಖಚಿತವಾಗಿದೆ.

- Advertisement -
spot_img

Latest News

error: Content is protected !!