Saturday, June 27, 2026
Homeಅಪರಾಧಟಿಪ್ಪರ್ ಢಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು; ಕಾರು ಚಾಲಕ ಗಂಭೀರ

ಟಿಪ್ಪರ್ ಢಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು; ಕಾರು ಚಾಲಕ ಗಂಭೀರ

- Advertisement -
- Advertisement -

ಉಡುಪಿ: ಕೋಟ ಬನ್ನಾಡಿ ಬಳಿ ಉಪ್ಲಾಡಿಯಲ್ಲಿ ಕಾರಿಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿ ಕಾರು ಚಾಲಕ ಗಣೇಶ್ ಶೆಟ್ಟಿ (39).

ಗಣೇಶ್ ಶೆಟ್ಟಿ ಕೋಟದ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಕಾರಿನಲ್ಲಿ ಕೋಟ ಮೂರ್ಕೈಯಿಂದ ಮಧುವನ ಕಡೆಗೆ ಸಂಚರಿಸುತ್ತಿದ್ದ ವೇಳೆ ಬನ್ನಾಡಿಯಿಂದ ಕೋಟ ಕಡೆಗೆ ಬರುತ್ತಿದ್ದ ಟಿಪ್ಪರ್ ವೊಂದು ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿಯಾಗಿದೆ.

ಈ ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಗಣೇಶ್ ಶೆಟ್ಟಿ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!