Tuesday, June 9, 2026
Homeಕರಾವಳಿಒಣಮೆಣಸು ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ದ್ವಿಚಕ್ರ ವಾಹನ ಕಳವು

ಒಣಮೆಣಸು ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ದ್ವಿಚಕ್ರ ವಾಹನ ಕಳವು

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿಯಲ್ಲಿ ಒಣಮೆಣಸು ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಕುರುಬರ ಬೂದಿಹಾಳ ಗ್ರಾಮ ನಿವಾಸಿ ಕೆ ಟಿ ಕೃಷ್ಟಶೆಟ್ಟಿ (54) ಎಂಬವರ ಬೈಕ್.

ಬೆಳ್ತಂಗಡಿ ತಾಲೂಕಿನ ಗ್ರಾಮದಲ್ಲಿ ಮೋಟಾರ್ ಸೈಕಲ್ ನಲ್ಲಿ ಒಣಮೆಣಸನ್ನು ಇರಿಸಿಕೊಂಡು ಮಾರಾಟ ಮಾಡಿ, ಎಲ್ಲಾ ಒಣಮೆಣಸು ವ್ಯಾಪಾರವಾದ ನಂತರ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಮೋಟಾರ್ ಸೈಕಲ್ ಅನ್ನು ನಿಲ್ಲಿಸಿ, ಸ್ನಾನ ಮಾಡಲು ನದಿಗೆ ತೆರಳಿದ್ದರು. ಸ್ನಾನ ಮುಗಿಸಿ ನಂತರ ಪಾರ್ಕಿಂಗ್ ಸ್ಥಳಕ್ಕೆ ಬಂದಾಗ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ.

ಕಳೆದು ಹೋದ ಮೋಟಾರ್ ಸೈಕಲ್ ನ ಅಂದಾಜು ಮೌಲ್ಯ ರೂ 30,000/- ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!