Wednesday, June 26, 2024
Homeತಾಜಾ ಸುದ್ದಿಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿಕೆಶಿ ಅಂತಿಮ ಗುರಿ‌: ಸಚಿವ ಸುನಿಲ್‌ ಕುಮಾರ್‌

ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿಕೆಶಿ ಅಂತಿಮ ಗುರಿ‌: ಸಚಿವ ಸುನಿಲ್‌ ಕುಮಾರ್‌

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್‌ ನೀಡೋದಾಗಿ ಡಿ.ಕೆ.ಶಿವಕುಮಾರ್‌ ಘೋಷಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸುನಿಲ್‌ ಕುಮಾರ್‌ ಸರಣಿ ಟ್ವೀಟ್‌ ಮಾಡಿ ತಿರುಗೇಟು ಕೊಟ್ಟಿದ್ದಾರೆ.

ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗಿಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ ಎಂದು ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ಎಂದು ಪ್ರಶ್ನಿಸಿದ್ದಾರೆ.

- Advertisement -
spot_img

Latest News

error: Content is protected !!