Wednesday, June 24, 2026
Homeಕರಾವಳಿಕರಾವಳಿಯಲ್ಲಿ ಕೇಂದ್ರ ಗೃಹ ಸಚಿವರಿಗೆ ರಕ್ಷಣೆ ಇಲ್ಲ: ಇನ್ನು ಜನರ ಪರಿಸ್ಥಿತಿ ಏನಿರಬಹುದು? ಡಿಕೆಶಿ

ಕರಾವಳಿಯಲ್ಲಿ ಕೇಂದ್ರ ಗೃಹ ಸಚಿವರಿಗೆ ರಕ್ಷಣೆ ಇಲ್ಲ: ಇನ್ನು ಜನರ ಪರಿಸ್ಥಿತಿ ಏನಿರಬಹುದು? ಡಿಕೆಶಿ

- Advertisement -
- Advertisement -

ಬೆಂಗಳೂರು: ಪುತ್ತೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ರದ್ದುಗೊಂಡಿದ್ದು, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟೀಕೆಗಳ ಸುರಿಮಳೆಗೈದಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಮಿತ್ ಶಾಗೆ ಲಾ & ಆರ್ಡರ್​ಗೆ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವರಿಗೆ ರಕ್ಷಣೆ ಕೊಡಲು ಸಾಧ್ಯವಿಲ್ಲ ಎಂದಾದ್ರೆ ಜನಸಾಮಾನ್ಯರ ಗತಿಯೇನು ಎಂದು ಪ್ರಶ್ನಿಸಿದ್ದಾರೆ.

ಪುತ್ತೂರಿನಲ್ಲಿ ಇಂದು ಸಂಜೆ ಕೇಂದ್ರ ಗೃಹ ಸಚಿವರ ರೋಡ್ ಶೋ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ರೋಡ್‌ ಶೋ ರದ್ದುಪಡಿಸಲಾಗಿದೆ.

- Advertisement -

Latest News

error: Content is protected !!