Wednesday, June 3, 2026
Homeಕರಾವಳಿವಿಟ್ಲ: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವ ವಿಡಿಯೋ ವೈರಲ್- ಮದುವೆ ದಿನ ಕೊರಗಜ್ಜನ...

ವಿಟ್ಲ: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವ ವಿಡಿಯೋ ವೈರಲ್- ಮದುವೆ ದಿನ ಕೊರಗಜ್ಜನ ವೇಷ ಭೂಷಣ ಧರಿಸಿ ಕುಣಿದ ಮುಸ್ಲಿಂ ವ್ಯಕ್ತಿ

- Advertisement -
- Advertisement -

ವಿಟ್ಲ: ಮುಸ್ಲಿಂ ಸಮುದಾಯದ ಮದುವೆ ಕಾರ್ಯಕ್ರಮದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷಭೂಷಣ ಧರಿಸಿ ಅವಮಾನ ಮಾಡಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮುಸ್ಲಿಂ ಯುವಕನೊಬ್ಬನ ಮದುವೆಯ ದಿನದಂದು ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ, ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುವ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಈ ಕೃತ್ಯವನ್ನು ಖಂಡಿಸಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸದೇ ಇದ್ದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೊಳ್ಳಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದೆ. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ (ತಾಳ) ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರ ಆಗಮಿಸಿದ್ದ ಎನ್ನಲಾಗಿದೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಕೃತ್ಯವನ್ನೆಸಗಿ ಹಿಂದೂಗಳ ಆಚಾರ ಹಾಗು ನಂಬಿಕೆಯನ್ನು ಟೀಕಿಸಿದ್ದಾರೆ. ಅಷ್ಟೇ ಅಲ್ಲದೇ ಕೊರಗ ಸಮುದಾಯವನ್ನೇ ಅವಮಾನಿಸಿದ್ದಾರೆ. ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!