Friday, April 19, 2024
Homeತಾಜಾ ಸುದ್ದಿಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ ವಿಧಿವಶ

ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ ವಿಧಿವಶ

spot_img
- Advertisement -
- Advertisement -

ಬಳ್ಳಾರಿ: ಹಂಪಿ‌ಕನ್ನಡ ವಿವಿಯ ನಾಡೋಜ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಯಲಯದ ಗೌರವ ಡಾಕ್ಟರೇಟ್, ರಾಜ್ಯೋತ್ಸವ ಪಡೆದ ಹಿರಿಯ ರಂಗಭೂಮಿ ಕಲಾವಿದೆ, ಗಾಯಕಿ ಸುಭದ್ರಮ್ಮ ಮನ್ಸೂರ್ (81) ಅವರು ನಿನ್ನೆ ರಾತ್ರಿ 11.30 ರ ಸುಮಾರಿಗೆ ನಿಧನರಾಗಿದ್ದಾರೆ.

ಬಳ್ಳಾರಿ ಸುಭದ್ರಮ್ಮ ಅಂತಲೇ ಖ್ಯಾತಿ ಗಳಿಸಿದ್ದ ಇವರು ಎರಡು ಸಾವಿರಕ್ಕೂ ಹೆಚ್ಚು ನಾಟಕ ಪ್ರದರ್ಶನಗಳಿಗೆ ಬಣ್ಣ ಹಚ್ಚಿದ್ದಾರೆ. 50 ವರ್ಷಗಳ ಕಾಲ ರಂಗಭೂಮಿಯಲ್ಲಿ ಮಿಂಚಿದ ಗಣಿನಾಡಿನ ಪ್ರತಿಭೆಯಾಗಿದ್ದಾರೆ. ತಮ್ಮ 27ನೇ ವಯಸ್ಸಿಗೆ ರಂಗಭೂಮಿ ಪ್ರವೇಶಿಸಿದ ಸುಭದ್ರಮ್ಮ, ಕುಂತಿ, ಗಾಂಧಾರಿ, ದ್ರೌಪದಿ, ಉತ್ತರೆ, ಸೀತೆ ಪಾತ್ರಗಳ ಮೂಲಕ ಕಲಾಸಕ್ತ ಜನಮಾನಸದಲ್ಲಿ ಅಚ್ಚೊತ್ತಿದ್ದರು.

ಇವರ ರಂಗಭೂಮಿ ಸೇವೆಯನ್ನು ಗುರುತಿಸಿದ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಬಳ್ಳಾರಿ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್, ನಾಟಕ ಅಕಾಡೆಮಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಹಂಪಿ ವಿವಿ ಕೊಡಮಾಡುವ ನಾಡೋಜ ಸೇರಿ ಹಲವಾರು ಗೌರವ ಪುರಸ್ಕಾರಗಳು ಅವರಿಗೆ ಸಂದಿವೆ.

ಹಲವು ವರ್ಷಗಳ ಹಿಂದೆ ಇವರ ಪತಿ ಲಿಂಗರಾಜ ಮನ್ಸೂರ್​ ನಿಧನರಾಗಿದ್ದರು. ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಇವರು ಅಗಲಿದ್ದಾರೆ.

ಬಳ್ಳಾರಿಯ ರೇಡಿಯೋ ಪಾರ್ಕ್​ ಪ್ರದೇಶದಲ್ಲಿರುವ ಮನೆಯಲ್ಲಿ ರಾತ್ರಿ 11.30ರಲ್ಲಿ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ವಿಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!