Friday, June 5, 2026
Homeಕರಾವಳಿನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

- Advertisement -
- Advertisement -

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

2013ರ ಜನವರಿಯಲ್ಲಿ ಮುತ್ತೂರು ಗ್ರಾಮದ ಮನೋಲಿ ಗದ್ದೆ ಎಂಬಲ್ಲಿ ಕೊಳವೂರು ಗ್ರಾಮದ ಹರೀಶ್ ಆಚಾರಿ ಎಂಬಾತ ಮನೆಯ ಹೆಂಚನ್ನು ತೆಗೆದು ಒಳ ಪ್ರವೇಶಿಸಿ ಕಳ್ಳತನ ಮಾಡಲು ಯತ್ನಿಸಿದ್ದ. ನಂತರ ಮನೆಯವರ ಬೊಬ್ಬೆ ಕೇಳಿ ಆರೋಪಿ ತಪ್ಪಿಸಿಕೊಂಡಿದ್ದ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಕಳ್ಳತನ ಯತ್ನ ಪ್ರಕರಣ ದಾಖಲಾಗಿತ್ತು.

ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದ ಆರೋಪಿ ಮತ್ತೆ ಹಾಜರಾಗದೆ ಸತತ 7 ವರ್ಷದಿಂದ ತಲೆಮರೆಸಿಕೊಂಡಿದ್ದ. ನಿನ್ನೆ ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಪೊಲೀಸ್ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

- Advertisement -

Latest News

error: Content is protected !!