ಬಂಟ್ವಾಳ: ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು ರೂ 2,50,000 /- ಮೌಲ್ಯದ 21 ಗ್ರಾಂ ಚಿನ್ನಾಭರಣ ಮತ್ತು ರೂ 600/- ನಗದು ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ (18) ಹಾಗೂ ಮಂಗಳೂರು ಸುರತ್ಕಲ್ ನಿವಾಸಿ ಕಿಶನ್ (22) ಬಂಧಿತರು.ಆರೋಪಿಗಳು ಬೋಳ್ಪಾಡಿ ಎಂಬಲ್ಲಿ, ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿದ್ದರು. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಪ್ರಕರಣದ ತನಿಖಾಧಿಕಾರಿ ಎ.ಎಸ್.ಐ ನವೀನ್, ಹೆಡ್ ಕಾನ್‌ಸ್ಟೇಬಲ್‌ಗಳಾದ ಸುರೇಶ್ ಕುಮಾರ್, ರಾಜೇಶ್, ರಕ್ಷಿತ್, ಕಾನ್‌ಸ್ಟೇಬಲ್‌ಗಳಾದ ಬಸವರಾಜ ಕುಡಗುಂಟಿ, ನಾಗನಾಥ, ಮತ್ತು ಮಪಿಸಿ ರೇವತಿ, ಭಾಗ್ಯಮ್ಮ, ಮಾಲಾಶ್ರೀ ರವರುಗಳು ಪಾಲ್ಗೊಂಡಿದ್ದು, ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ್ ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ದಿವಾಕರ ಮತ್ತು ಸಂಪತ್‌ರವರು ಆರೋಪಿ ಪತ್ತೆ ಕಾರ್ಯದಲ್ಲಿ ಸಹಕರಿಸಿರುತ್ತಾರೆ.


