Saturday, January 16, 2021
Home ಕರಾವಳಿ ಬಂಟ್ವಾಳದಲ್ಲಿ ಬಾರ್ ಗೆ ಕನ್ನ ಹಾಕಿದ ಕಳ್ಳರು: ಲಕ್ಷಾಂತರ ರೂಪಾಯಿ ನಗದು ಹಾಗೂ ಮದ್ಯ ಕಳವು

ಬಂಟ್ವಾಳದಲ್ಲಿ ಬಾರ್ ಗೆ ಕನ್ನ ಹಾಕಿದ ಕಳ್ಳರು: ಲಕ್ಷಾಂತರ ರೂಪಾಯಿ ನಗದು ಹಾಗೂ ಮದ್ಯ ಕಳವು

- Advertisement -
- Advertisement -

ಬಂಟ್ವಾಳ: ಬಾರ್ ವೊಂದಕ್ಕೆ ನುಗ್ಗಿ ಕಳ್ಳರು ಲಕ್ಷಾಂತರ ರೂ ನಗದು ಹಾಗೂ ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಿದ ಘಟನೆ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ನಡೆದಿದೆ.

ನಿನ್ನೆ ರಾತ್ರಿ ಕಂದೂರುನಲ್ಲಿರುವ ಸುರಭಿ ಬಾರ್ ನ ಎದುರು ಭಾಗದ ಶಟರ್ ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ನಲ್ಲಿದ್ದ ಸುಮಾರು ಮೂರು ಲಕ್ಷ ರೂ. ನಗದು ದೋಚಿದ್ದಾರೆ.ಅಲ್ಲದೇ ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್.ಐ. ಅವಿನಾಶ್, ಅಪರಾಧ ವಿಭಾಗದ ಎಸ್.ಐ ಕಲೈಮಾರ್ , ಎಚ್.ಸಿ.ಸುರೇಶ್ ಪಡಾರ್, ಸಿಬ್ಬಂದಿಗಳಾದ ಶ್ರೀಕಾಂತ್, ಉಸ್ಮಾನ್ , ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
- Advertisment -

Latest News

error: Content is protected !!