Saturday, June 6, 2026
Homeಕರಾವಳಿಉಡುಪಿಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕುಂದಾಪುರದ ಕಮಲಶಿಲೆ ಗ್ರಾಮದ ಹಳ್ಳಿಹೊಳೆ ಎಂಬಲ್ಲಿ ನಡೆದಿದೆ.

ರಾಘವೇಂದ್ರ ಯಡಿಯಾಳ ಎಂಬವರ ಮನೆಯ ಹಿಂಬದಿಯ ಬಾಗಿಲನ್ನು ತೆರೆದು ಒಳ ಪ್ರವೇಶಿಸಿದ ಕಳ್ಳರು, ಕೋಣೆಯ ಗೋಡ್ರೇಜ್ ನಲ್ಲಿದ್ದ ಅವರ ತಾಯಿಯ 14 ಗ್ರಾಂ ತೂಕದ 2 ಚಿನ್ನದ ಬಳೆ, 30 ಗ್ರಾಂನ ಉದ್ದ ಚಿನ್ನದ ಸರ, 4 ಗ್ರಾಂ ಚಿನ್ನದ ಉಂಗುರ, 5000 ರೂ. ನಗದು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ 3 ಲಕ್ಷದ 5 ಸಾವಿರ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!