Monday, May 6, 2024
Homeಕರಾವಳಿಮಂಗಳೂರು; ಗೃಹಪ್ರವೇಶದ ದಿನ ಹೋಮ ನಡೆಯುತ್ತಲೇ ಮನೆಗೆ ನುಗ್ಗಿ ತನ್ನ ಕರಾಮತ್ತು ತೋರಿಸಿದ ಕಳ್ಳ

ಮಂಗಳೂರು; ಗೃಹಪ್ರವೇಶದ ದಿನ ಹೋಮ ನಡೆಯುತ್ತಲೇ ಮನೆಗೆ ನುಗ್ಗಿ ತನ್ನ ಕರಾಮತ್ತು ತೋರಿಸಿದ ಕಳ್ಳ

spot_img
- Advertisement -
- Advertisement -

ಮಂಗಳೂರು:  ಗ್ರಹಪ್ರವೇಶದ ದಿನ ಹೋಮ ನಡೆಯುತ್ತಿದ್ದಾಗ ಮನೆಗೆ ಎಂಟ್ರಿ ಕೊಟ್ಟು ಕಳ್ಳನೊಬ್ಬ ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ.


ಡಿಸೆಂಬರ್ 10ರಂದು ರಾತ್ರಿ ಇಲ್ಲಿನ ನಿವಾಸಿಗಳಾದ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ಎಂಬಲ್ಲಿ ತಾವು ನಿರ್ಮಿಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು. ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ ಹೋಮದ ಹೊಗೆಯಲ್ಲಿ ಯಾರಿಗೂ ಗೊತ್ತಾಗದಂತೆ ಒಳ ನುಗ್ಗಿದ್ದ ಬರ್ಮುಡ ಧಾರಿ ಯುವಕನೋರ್ವ ಕೋಣೆಯೊಳಗೆ ನುಗ್ಗಿ ಬ್ಯಾಗಲ್ಲಿದ್ದ 15 ರೂಪಾಯಿ ನಗದು, ಮೊಬೈಲ್ ಚಾರ್ಜರ್ ಮತ್ತು ಬೆಲೆ ಬಾಳುವ ಕಾಸ್ಮೆಟಿಕ್ಸ್ ಕಳವು ನಡೆಸಿದ್ದಾನೆ. ಕಳ್ಳ ಹೋಮ ನಡೆಯುತ್ತಿದ್ದ ವೇಳೆ ಮನೆಯೊಳಗಿನ ಕೋಣೆಗೆ ನುಗ್ಗಿ ಹೊರನಡೆಯುವ ದೃಶ್ಯ ಗೃಹಪ್ರವೇಶದ ದಿನ ಮಾಡಿದ ವೀಡಿಯೋದಲ್ಲಿ ದಾಖಲಾಗಿದೆ.

ಅದೇ ದಿನ ಮಧ್ಯ ರಾತ್ರಿ ಅಲ್ಲೇ ಸಮೀಪದ ಶಿವ ಸುಬ್ರಹ್ಮಣ್ಯ ಪ್ರಸಾದ್ ಭಟ್ ಎಂಬವರ ಮನೆಗೂ ರಾತ್ರಿ ಕನ್ನ ಹಾಕಿದ್ದ ಕಳ್ಳ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲನ್ನ ಒಡೆದು ಕೋಣೆಯೊಳಗಿನ ಕಪಾಟಲ್ಲಿದ್ದ 11 ಸಾವಿರ ರೂಪಾಯಿ ನಗದು,32 ಗ್ರಾಂ ಚಿನ್ನ ,8 ಬೆಳ್ಳಿಯ ನಾಣ್ಯ,ಮತ್ತು 3 ರೇಡೋ ವಾಚ್ ಗಳು ಸೇರಿ ಒಟ್ಟು 1 ಲಕ್ಷದ 49 ಸಾವಿರ ರೂಪಾಯಿ ಮೌಲ್ಯದ ನಗ,ನಗದನ್ನ ಕದ್ದೊಯ್ದಿದ್ದಾನೆ. ಬರ್ಮುಡ ಧಾರಿ ಕಳ್ಳನ ಜತೆ ಇನ್ನೋರ್ವನು ಇದ್ದು ಇವರಿಬ್ಬರು ಡಿಸೆಂಬರ್ 10 ರಾತ್ರಿ ಕಳ್ಳತನ ನಡೆದಿದ್ದ ಪ್ರದೇಶ ಅಡ್ಕಬೈಲಿಗೆ ದ್ವಿಚಕ್ರ ವಾಹನದಲ್ಲಿ ಬರುವ ದೃಶ್ಯ ಸಿ.ಸಿಟಿವಿಯಲ್ಲಿ ಸೆರೆಯಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದು ವೀಡಿಯೋ ಫೂಟೇಜ್ ಆಧಾರದಲ್ಲಿ ಕಳ್ಳರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!